Sunday, June 14, 2026
Homeತಾಜಾ ಸುದ್ದಿಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನಲೆ, ಬಿಜೆಪಿ ವತಿಯಿಂದ ವಿಶೇಷ ಪೂಜೆ

ಬಂಟ್ವಾಳ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಹಿನ್ನಲೆ, ಬಿಜೆಪಿ ವತಿಯಿಂದ ವಿಶೇಷ ಪೂಜೆ

- Advertisement -
- Advertisement -

ಬಂಟ್ವಾಳ: ಭಾರತದ ಪ್ರಧಾನಿ ನರೇಂದ್ರ ಮೋದಿ ಇಂದು ತಮ್ಮ 70ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ದೇಶದ ನಾನಾ ಕಡೆಯಲ್ಲಿ ವಿಶ್ವ ಮಾನ್ಯ ನಾಯಕನ ಹುಟ್ಟುಹಬ್ಬವನ್ನು ವಿಶೇಷ ಮತ್ತು ಮಾದರಿ ರೀತಿಯಲ್ಲಿ ಆಚರಿಸಲಾಗುತ್ತಿದೆ.

ಹಾಗೆಯೇ ಪ್ರಧಾನಿ ಶ್ರೀ ನರೇಂದ್ರ ಮೋದಿಯವರ ಜನ್ಮ ದಿನಾಚರಣೆ ಪ್ರಯುಕ್ತ ಇಂದು ಪುರಾಣ ಪ್ರಸಿದ್ಧ ನಂದಾವರದ ಶ್ರೀ ವಿನಾಯಕ ಶಂಕರನಾರಾಯಣ ದೇವಸ್ಥಾನದಲ್ಲಿ ಬಂಟ್ವಾಳ ಕ್ಷೇತ್ರ ಬಿಜೆಪಿ ವತಿಯಿಂದ ಪ್ರಧಾನಿಯವರಿಗೆ ದೀರ್ಘಾಯುರಾರೋಗ್ಯವನ್ನು ಕರುಣಿಸುವಂತೆ ಪ್ರಾರ್ಥನೆ ಮಾಡಿ ದೇವರಿಗೆ ರುದ್ರಾಭಿಷೇಕ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷರಾದ ದೇವದಾಸ ಶೆಟ್ಟಿ,ಬಿಜೆಪಿ ಕಾರ್ಯದರ್ಶಿಗಳಾದ ರಮಾನಾಥ ರಾಯಿ,ಸೀತಾರಾಮ ಪೂಜಾರಿ,ಗಣೇಶ್ ರೈ ಮಾಣಿ,ಪುರುಷೋತ್ತಮ ಶೆಟ್ಟಿ,ಪ್ರಮುಖರಾದ ಪುಷ್ಪರಾಜ್ ಚೌಟ ಉಪಸ್ಥಿತರಿದ್ದರು.

- Advertisement -

Latest News

error: Content is protected !!