Friday, June 5, 2026
Homeತಾಜಾ ಸುದ್ದಿಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಏಳು ಮಂದಿ ಪ್ರಯಾಣಿಸುತ್ತಿದ್ದ ಕಾರು !

ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದ ಏಳು ಮಂದಿ ಪ್ರಯಾಣಿಸುತ್ತಿದ್ದ ಕಾರು !

- Advertisement -
- Advertisement -

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಜಾವಳಿ ಸಮೀಪ ಏಳು ಮಂದಿಯಿದ್ದ ಕ್ವಾಲಿಸ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿ ಬಿದ್ದ ಘಟನೆ ನಡೆದಿದೆ.

ಬೆಂಗಳೂರಿನ ದೇವನಹಳ್ಳಿ ಮೂಲದ ಪ್ರವಾಸಿಗರು ಇಂದು ಬೆಳಗಿನ ಜಾವ ಮೂರು ಗಂಟೆ ಹೊರನಾಡು ದೇವಸ್ಥಾನಕ್ಕೆ ಹೋಗುತ್ತಿದ್ದು, ಭಾರೀ ಮಳೆಯಾಗಿದ್ದರಿಂದ ರಸ್ತೆ ಕಾಣದೇ ಕಾರು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ.

ಅದೃಷ್ಟವಶಾತ್​ ಎಳು ಜನ ಪ್ರವಾಸಿಗರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

- Advertisement -

Latest News

error: Content is protected !!