Sunday, June 7, 2026
Homeತಾಜಾ ಸುದ್ದಿಪವಿತ್ರ ಚರ್ಚ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಚರ್ಚ್ ಫಾದರ್: ಕಮೀಷನರ್ ಕಚೇರಿ ಆವರಣದಲ್ಲೇ...

ಪವಿತ್ರ ಚರ್ಚ್ ನಲ್ಲೇ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಚರ್ಚ್ ಫಾದರ್: ಕಮೀಷನರ್ ಕಚೇರಿ ಆವರಣದಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಸಂತ್ರಸ್ತೆ

- Advertisement -
- Advertisement -

ಕಲಬುರ್ಗಿ : ಚರ್ಚ್ ನ ಫಾದರ್ ಒಬ್ಬರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ಈ ಬಗ್ಗೆ ಪೊಲೀಸರಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಿ ಪೊಲೀಸ್ ಆಯುಕ್ತರ ಕಚೇರಿ ಆವರಣದಲ್ಲಿ ಮಹಿಳೆ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಕಲಬುರಗಿ ನಗರದ ಪೊಲೀಸ್ ಕಮೀಷನರ್ ಕಚೇರಿ ಮುಂದೆ ನಡೆದಿದೆ.

ಕಲಬುರ್ಗಿಯ ಸೆಂಟ್ ಮೇರಿ ಕ್ಯಾಥೋಡ್ರಾಲ್ ಚರ್ಚ್ ನಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆಯೊಬ್ಬರಿಗೆ ಚರ್ಚ್ ನ ಫಾದರ್ ಕ್ಲೀವನ್ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ. ತಮಗೆ ನ್ಯಾಯ ಕೊಡಿಸುವಂತೆ ಕಲಬುರ್ಗಿ ಕಮೀಷನರ್ ಕಚೇರಿಯಲ್ಲಿ ಆವರಣದಲ್ಲಿಯೇ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.

ಫಾದರ್ ಕ್ಲೀವನ್

ಒಮ್ಮೆ ಚರ್ಚ್​ನ ಫಾದರ್ ಕ್ಲೀವನ್ ಎಂಬುವವರು ರೂಂ ಕ್ಲೀನ್ ಮಾಡಲು ಕರೆದು ಸಂತ್ರಸ್ತೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದಾರೆ ಎಂದು ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮತ್ತೊಂದಡೆ ಸಿಸ್ಟರ್ ಅಂಥೋನಿ ಮೇರಿ ಅನ್ನೋರು ಬಾಧಿತಳ ಮೇಲೆ ನಕಲಿ ಪೇಸ್ ಬುಕ್ ಖಾತೆ ಸೃಷ್ಟಿಸಿರುವ ಆರೋಪದಡಿ ದೂರು ದಾಖಲಿಸಿದ್ದಾರೆ. ಈ ಬಗ್ಗೆ ಸಿಸಿಎನ್ ಠಾಣೆಗೆ ದೂರು ನೀಡಿದ್ದಾರೆ. ದೂರಿನ ಬಗ್ಗೆ ವಿಚಾರಣೆಗೆ ಸಂತ್ರಸ್ತೆಯನ್ನು ಸಿಸಿಎನ್ ಪೊಲೀಸರು ಕರೆದಿದ್ರು. ಈ ವೇಳೆ ನನಗೆ ನ್ಯಾಯ ಸಿಗುತ್ತಿಲ್ಲ‌ ಅಂತಾ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ನಗರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೆಚ್ಚಿನ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!