Saturday, June 6, 2026
Homeತಾಜಾ ಸುದ್ದಿನಾಲ್ಕು ಕಂದಮ್ಮಗಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ

ನಾಲ್ಕು ಕಂದಮ್ಮಗಳಿಗೆ ಜನ್ಮ ನೀಡಿದ ಕೊರೊನಾ ಸೋಂಕಿತೆ

- Advertisement -
- Advertisement -

ಉತ್ತರ ಪ್ರದೇಶ  : ಗೋರಖ್ ಪುರದ ಬಿಆರ್​ಡಿ ವೈದ್ಯಕೀಯ ಕಾಲೇಜಿನಲ್ಲಿ ಕೊರೊನಾ ಸೋಂಕಿತೆಯೊಬ್ಬರು ನಾಲ್ಕು ಮಕ್ಕಳಿಗೆ ಜನ್ಮ ನೀಡಿದ್ದಾರೆ.ನಾಲ್ಕೂ ಮಕ್ಕಳು ಮತ್ತು ತಾಯಿ ಆರೋಗ್ಯವಾಗಿದ್ದು, ವೆಂಟಿಲೇಟರ್​ನಲ್ಲಿ ಇರಿಸಲಾಗಿದೆ.

ತಾಯಿ ಕೂಡ ಆರೋಗ್ಯದಿಂದ ಇದ್ದಾರೆ ಎಂದು ಕಾಲೇಜಿನ ಪ್ರಿನ್ಸಿಪಾಲ್ ಗಣೇಶ್ ಕುಮಾರ್ ಹೇಳಿದ್ದಾರೆ. ತುಂಬು ಗರ್ಭಿಣಿಯಾಗಿದ್ದ ಡಿಯೋರಿಯಾ ಜಿಲ್ಲೆಯ ಗೌರಿ ಬಜಾರ್ ನಿವಾಸಿ 26 ವರ್ಷದ ಮಹಿಳೆ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದರಿಂದ ಕಳೆದ ಮಂಗಳವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಪರೀಕ್ಷಿಸಿಕೊಂಡಿದ್ದರು. ಈ ವೇಳೆ ಕೋವಿಡ್ ಪಾಸಿಟಿವ್ ದೃಢವಾಗಿದೆ.

ಅಲ್ಲಿಯೇ ಕೊರೊನಾಕ್ಕೂ ಚಿಕಿತ್ಸೆ ನೀಡಿ, ಸುರಕ್ಷಿತವಾಗಿ ಹೆರಿಗೆಯನ್ನೂ ಮಾಡಿಸಲಾಗಿದೆ. ನಾಲ್ಕು ಶಿಶುಗಳ ತೂಕ 980 ಗ್ರಾಂನಿಂದ 1.5 ಕೆಜಿ ನಡುವೆ ಇದೆ. ಇದೊಂದು ಅಪರೂಪದ ಪ್ರಕರಣವಾಗಿದ್ದು, ಹೆರಿಗೆ ಮಾಡಿಸುವುದು ಸವಾಲಿನ ಕೆಲಸವಾಗಿತ್ತು. ಆದಾಗ್ಯೂ, ತಾಯಿ ಮಗು ಆರೋಗ್ಯದಿಂದ ಇದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!