Saturday, June 6, 2026
Homeತಾಜಾ ಸುದ್ದಿಸ್ಕೂಟರ್-ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ: ತಂದೆ‌ ಮಗಳ ದಾರುಣ ಸಾವು

ಸ್ಕೂಟರ್-ಗ್ಯಾಸ್ ಟ್ಯಾಂಕರ್ ನಡುವೆ ಅಪಘಾತ: ತಂದೆ‌ ಮಗಳ ದಾರುಣ ಸಾವು

- Advertisement -
- Advertisement -

ಕಾರವಾರ: ಸ್ಕೂಟರ್ ಹಾಗು ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು ಸ್ಥಳದಲ್ಲಿಯೇ ಮೃತಪಟ್ಟಿರುವ ದಾರುಣ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರೆಬೈಲ್ ಘಟ್ಟದ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಇಂದು ಸಂಭವಿಸಿದೆ.

ವಿನೋದ್ ಕಿಂದಳಕರ್ (56) ಹಾಗೂ ಅವರ ಮಗಳು ಸುನೇಹಾ ಕಿಂದಳಕರ್ (12) ಮೃತ ದುರ್ದೈವಿಗಳು. ಮೃತ ವಿನೋದ್ ಕಿಂದಳಕರ್ ಅವರು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ ಪ್ರಮುಖ ಅಗ್ನಿಶಾಮಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ.

ವಿನೋದ್ ಕಿಂದಳಕರ್, ಮಗಳನ್ನು ಯಲ್ಲಾಪುರದಿಂದ ತಮ್ಮ ಊರಾದ ಅಂಕೋಲಾ ತಾಲೂಕಿನ ಹಾರವಾಡಾಕ್ಕೆ ಬಿಡಲು ಹೊರಟಿದ್ದಾಗ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ವಿಷಯ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!