Sunday, May 19, 2024
Homeಕರಾವಳಿಕಾಸರಗೋಡುಮಂಜೇಶ್ವರ ನೂತನ ಬಂದರಿಗೆ 'ಮುಖ್ಯಮಂತ್ರಿ ಪಿಣರಾಯಿ ವಿಜಯನ್' ರವರಿಂದ ಚಾಲನೆ

ಮಂಜೇಶ್ವರ ನೂತನ ಬಂದರಿಗೆ ‘ಮುಖ್ಯಮಂತ್ರಿ ಪಿಣರಾಯಿ ವಿಜಯನ್’ ರವರಿಂದ ಚಾಲನೆ

spot_img
- Advertisement -
- Advertisement -

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಮೀನುಗಾರಿಕೆ ವಲಯಕ್ಕೆ ಹೊಸ ಹುರುಪು ನೀಡುವ ನಿಟ್ಟಿನಲ್ಲಿ ಮಂಜೇಶ್ವರದಲ್ಲಿ ಬಂದರು ನಿರ್ಮಾಣಗೊಂಡಿದ್ದು ಅದರ ಉದ್ಘಾಟನಾ ಕಾರ್ಯಕ್ರಮ ಇಂದು ನೆರವೇರಲಿದೆ. ನೂತನ ಬಂದರಿಗೆ ‘ಮುಖ್ಯಮಂತ್ರಿ ಪಿಣರಾಯಿ ವಿಜಯನ್’ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಂ.ಸಿ.ಕಮರುದ್ದೀನ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಕೊಯಿಪ್ಪಾಡಿ, ಶಿರಿಯ, ಬಂಗ್ರ ಮಂಜೇಶ್ವರ ಮತ್ಸ್ಯ ಗ್ರಾಮಗಳ ಸರಿಸುಮಾರು ಹತ್ತು ಸಾವಿರ ಮೀನುಗಾರರು ಈ ಬಂದರು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಹಾರ್ಬರ್ ಕಾರ್ಯಕಾರಿ ಇಂಜಿನಿಯರಿಂಗ್ ಎ.ಮುಹಮ್ಮದ್ ಅಶ್ರಫ್ ತಿಳಿಸಿದ್ದಾರೆ.

ಬಂದರು ಚಟುವಟಿಕೆ ಆರಂಭಿಸುವ ಮೂಲಕ ಸ್ಥಳೀಯ 1200ಕ್ಕೂ ಅಧಿಕ ಮೀನುಗಾರ ಕಾರ್ಮಿಕರಿಗೆ ಪ್ರತ್ಯಕ್ಷವಾಗಿ, 4800 ಮಂದಿಗೆ ಪರೋಕ್ಷವಾಗಿ ಪ್ರಯೋಜನ ಲಭಿಸಲಿದೆ. ಮೀನುಗಾರಿಕೆ ಸಂಬಂಧ ಮಾರಾಟ, ರಫ್ತು ಸಂಬಂಧಿ ವಲಯಗಳ ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ.

ರಾಜ್ಯ ಹಾರ್ಬರ್ ಇಂಜಿನಿಯರಿಂಗ್ ಇಲಾಖೆ ಕಾಸರಗೋಡು ಜಿಲ್ಲೆಯಲ್ಲಿ ಸದ್ರಿ ಎರಡು ಮೀನು ಇಳಿಕೆ ಕೇಂದ್ರ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಮಂಜೇಶ್ವರ ಮೀನು ಇಳಿಕೆ ಕೇಂದ್ರ ಚಟುವಟಿಕೆ ಸುಗಮಗೊಳಿಸುವ ನಿಟ್ಟಿನಲ್ಲಿ ಬ್ರೇಕ್ ವಾಟರ್ ನ ಉದ್ದ ಹೆಚ್ಚಿಸುವ ಚಟುವಟಿಕೆ ಮುಂದುವರಿಯುತ್ತಿದೆ.

ಮಂಜೇಶ್ವರ: ಕಾಸರಗೋಡು ಜಿಲ್ಲೆಯ ಮೀನುಗಾರಿಕೆ ವಲಯಕ್ಕೆ ಹೊಸ ಹುರುಪು ನೀಡುವ ನಿಟ್ಟಿನಲ್ಲಿ ಮಂಜೇಶ್ವರದಲ್ಲಿ ಬಂದರು ನಿರ್ಮಾಣಗೊಂಡಿದೆ. ಕಾರ್ಯಕ್ರಮದಲ್ಲಿ ಕೇಂದ್ರ ಮೀನುಗಾರಿಕೆ ಸಚಿವ ಗಿರಿರಾಜ್ ಸಿಂಗ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದು, ರಾಜ್ಯ ಮೀನುಗಾರಿಕೆ ಸಚಿವೆ ಮೆರ್ಸಿ ಕುಟ್ಟಿಯಮ್ಮ ಅಧ್ಯಕ್ಷತೆ ವಹಿಸುವರು. ಕಂದಾಯ ಸಚಿವ ಇ.ಚಂದ್ರಶೇಖರನ್, ಸಂಸದ ರಾಜ್ ಮೋಹನ್ ಉಣ್ಣಿತ್ತಾನ್, ಶಾಸಕ ಎಂ.ಸಿ.ಕಮರುದ್ದೀನ್ ಮೊದಲಾದವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಜಿಲ್ಲೆಯ ಕೊಯಿಪ್ಪಾಡಿ, ಶಿರಿಯ, ಬಂಗ್ರ ಮಂಜೇಶ್ವರ ಮತ್ಸ್ಯ ಗ್ರಾಮಗಳ ಸರಿಸುಮಾರು ಹತ್ತು ಸಾವಿರ ಮೀನುಗಾರರು ಈ ಬಂದರು ಯೋಜನೆಯ ಫಲಾನುಭವಿಗಳಾಗಿದ್ದಾರೆ ಎಂದು ಹಾರ್ಬರ್ ಕಾರ್ಯಕಾರಿ ಇಂಜಿನಿಯರಿಂಗ್ ಎ.ಮುಹಮ್ಮದ್ ಅಶ್ರಫ್ ತಿಳಿಸಿದ್ದಾರೆ.

ಬಂದರು ಚಟುವಟಿಕೆ ಆರಂಭಿಸುವ ಮೂಲಕ ಸ್ಥಳೀಯ 1200ಕ್ಕೂ ಅಧಿಕ ಮೀನುಗಾರ ಕಾರ್ಮಿಕರಿಗೆ ಪ್ರತ್ಯಕ್ಷವಾಗಿ, 4800 ಮಂದಿಗೆ ಪರೋಕ್ಷವಾಗಿ ಪ್ರಯೋಜನ ಲಭಿಸಲಿದೆ. ಮೀನುಗಾರಿಕೆ ಸಂಬಂಧ ಮಾರಾಟ, ರಫ್ತು ಸಂಬಂಧಿ ವಲಯಗಳ ಮಂದಿಗೆ ಉದ್ಯೋಗಾವಕಾಶ ಲಭಿಸಲಿದೆ.

ರಾಜ್ಯ ಹಾರ್ಬರ್ ಇಂಜಿನಿಯರಿಂಗ್ ಇಲಾಖೆ ಕಾಸರಗೋಡು ಜಿಲ್ಲೆಯಲ್ಲಿ ಸದ್ರಿ ಎರಡು ಮೀನು ಇಳಿಕೆ ಕೇಂದ್ರ ಯೋಜನೆಗಳನ್ನು ಜಾರಿಗೊಳಿಸಿದೆ. ಇದರಲ್ಲಿ ಮಂಜೇಶ್ವರ ಮೀನು ಇಳಿಕೆ ಕೇಂದ್ರ ಚಟುವಟಿಕೆ ಸುಗಮಗೊಳಿಸುವ ನಿಟ್ಟಿನಲ್ಲಿ ಬ್ರೇಕ್ ವಾಟರ್ ನ ಉದ್ದ ಹೆಚ್ಚಿಸುವ ಚಟುವಟಿಕೆ ಮುಂದುವರಿಯುತ್ತಿದೆ.

- Advertisement -
spot_img

Latest News

error: Content is protected !!