- Advertisement -
![]()
- Advertisement -
ಬೆಂಗಳೂರು : ಕೊರೋನಾ ಭೀತಿಯ ಈ ಅವಧಿಯಲ್ಲಿ ರಾಜ್ಯದಲ್ಲಿ ಶಾಲೆ ಕಾಲೇಜುಗಳನ್ನು ಆರಂಭಿಸುವ ವಿಚಾರದಲ್ಲಿ ಯಾವುದೇ ಧಾವಂತವಿಲ್ಲ. ತರಾತುರಿಯಲ್ಲಿ ಶಾಲೆಗಳನ್ನು ಪುನಾರಂಭಿಸುವುದಿಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ.ಮಕ್ಕಳ ರಕ್ಷಣೆ ನಮ್ಮ ಮೊದಲ ಆದ್ಯತೆ. ಹೀಗಾಗಿ ಪೋಷಕರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ತರಾತುರಿಯಲ್ಲಿ ಶಾಲೆಗಳನ್ನು ಆರಂಭಿಸುವುದಿಲ್ಲ ಎಂದಿದ್ದಾರೆ.
ನಾನು ಪ್ರತಿನಿತ್ಯ ಪೋಷಕರು, ಶಿಕ್ಷಣ ತಜ್ಞರ ಜತೆ ಸಮಾಲೋಚನೆ ನಡೆಸುತ್ತಿದ್ದೇನೆ. ಕೇಂದ್ರ ಸರ್ಕಾರ ಶಾಲೆಗಳ ಪ್ರಾರಂಭದ ಬಗ್ಗೆ ರಾಜ್ಯಗಳು ನಿರ್ಧಾರ ಕೈಗೊಳ್ಳಲು ಸೂಚಿಸಿದೆ. ನಾವು ಯಾವುದೇ ಆತುರದ ತೀರ್ಮಾನ ಮಾಡುವುದಿಲ್ಲ ಎಂದು ಅವರು ತಿಳಿಸಿದ್ದಾರೆ.
- Advertisement -


