Thursday, June 4, 2026
Homeತಾಜಾ ಸುದ್ದಿಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ- ನೇಣು ಬಿಗಿದ ಸ್ಥಿತಿಯಲ್ಲಿ ಸಂತ್ರಸ್ತ ಮಹಿಳೆ ಶವ ಪತ್ತೆ

ಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ- ನೇಣು ಬಿಗಿದ ಸ್ಥಿತಿಯಲ್ಲಿ ಸಂತ್ರಸ್ತ ಮಹಿಳೆ ಶವ ಪತ್ತೆ

- Advertisement -
- Advertisement -

ಭೋಪಾಲ್‌: ಸಾಲು ಸಾಲು ಅತ್ಯಾಚಾರ ಪ್ರಕರಣಗಳ ಬೆನ್ನಲೇ ಮಧ್ಯಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರದ ಪ್ರಕರಣವೊಂದು ತಡವಾಗಿ ಬೆಳಕಿಗೆ ಬಂದಿದ್ದು ಸಂತ್ರಸ್ತ ಮಹಿಳೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಮಧ್ಯಪ್ರದೇಶದ ನರಸಿಂಗಪುರ ಜಿಲ್ಲೆಯಲ್ಲಿ ಸಾಮೂಹಿಕ ಅತ್ಯಾಚಾರಕ್ಕೊಳಗಾದ ದಲಿತ ಮಹಿಳೆ ಸೆಪ್ಟೆಂಬರ್‌ 28ರಂದು ಸ್ಥಳೀಯ ಪೋಲಿಸ್‌ ಠಾಣೆಯಲ್ಲಿ ದೂರು ನೀಡಿದ್ದರು. ಆದರೆ ಸ್ಥಳೀಯ ಠಾಣೆ ಪೊಲೀಸರು ದೂರು ದಾಖಲಿಸಿಕೊಂಡಿರಲಿಲ್ಲ ಎಂದು ಹಿರಿಯ ಪೊಲೀಸ್‌ ಅಧಿಕಾರಿಗಳು ತಿಳಿಸಿದ್ದಾರೆ.

ಆಕ್ಟೋಬರ್‌ 2ರಂದು ಸಂತ್ರಸ್ತೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಖಚಿತಪಡಿಸಿದ್ದು ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!