Thursday, May 2, 2024
Homeಕರಾವಳಿ"ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚಲ್ಲ", ಪುತ್ತೂರಿನಲ್ಲಿ ರೈತರಿಗೆ ಅಭಯ ನೀಡಿದ ಡಿ.ವಿ.ಸದಾನಂದ ಗೌಡ ಹಾಗೂ ಎಸ್...

“ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚಲ್ಲ”, ಪುತ್ತೂರಿನಲ್ಲಿ ರೈತರಿಗೆ ಅಭಯ ನೀಡಿದ ಡಿ.ವಿ.ಸದಾನಂದ ಗೌಡ ಹಾಗೂ ಎಸ್ ಟಿ ಸೋಮಶೇಖರ್

spot_img
- Advertisement -
- Advertisement -

ಗೌಡ ಹಾಗೂ ಎಸ್ ಟಿ ಸೋಮಶೇಖರ್

ಪುತ್ತೂರು : ಎಪಿಎಂಸಿಯನ್ನು ಯಾವುದೇ ಕಾರಣಕ್ಕೂ ಮುಚ್ಚುವುದಿಲ್ಲ. ರೈತರಿಗೆ ಮುಕ್ತ ಮಾರುಕಟ್ಟೆ ಒದಗಿಸಿ ಪೈಪೋಟಿ ಕಲ್ಪಿಸುವ ಕೆಲಸವನ್ನು ನಾವು ಮಾಡಿದ್ದೇವೆ. ಇನ್ನಷ್ಟು ಮೂಲಸೌಕರ್ಯವನ್ನು ಒದಗಿಸಲಿದ್ದೇವೆ. ಕಾಯ್ದೆ ತಿದ್ದುಪಡಿ ಬಗ್ಗೆ ವಿರೋಧ ಪಕ್ಷದವರು ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಕೇಂದ್ರ ಸಚಿವ ಡಿವಿ ಸದಾನಂದ ಗೌಡ, ರಾಜ್ಯ ಸಚಿವ ಎಸ್ ಟಿ ಸೋಮಶೇಖರ್ ಸ್ಪಷ್ಟ ಪಡಿಸಿದ್ದಾರೆ.

ಪುತ್ತೂರಿನ ಎಪಿಎಂಸಿ ಆವರಣದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದ ಕೇಂದ್ರ ಸಚಿವರಾದ ಡಿ.ವಿ.ಸದಾನಂದ ಗೌಡರು ಮಾತನಾಡಿ, ಎಪಿಎಂಸಿಯ ಸಂಪೂರ್ಣ ಹಕ್ಕು ರಾಜ್ಯ ಸರ್ಕಾರದ್ದು. ಹೀಗಾಗಿ ರಾಜ್ಯದ ಸರ್ಕಾರದ ಹಕ್ಕಿನಲ್ಲಿ ಕೇಂದ್ರ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದರು.

ಇದೇ ವೇಳೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಮಾತನಾಡಿ, ಕೊರೋನಾ ಲಾಕ್ಡೌನ್ ಸಮಯದಲ್ಲಿ ಯಶವಂತಪುರ ಎಪಿಎಂಸಿಗೆ ಸುಮಾರು 400 ಟನ್ ಈರುಳ್ಳಿ, ಲಕ್ಷ ಟನ್ ಟೊಮೇಟೊ ಬರುತ್ತಿತ್ತು. ಆದರೆ, ಟೊಮೇಟೊ ಕೆಜಿಗೆ 2 ರೂಪಾಯಿಗೂ ಮಾರಾಟವಾಗುತ್ತಿತ್ತು. ಇನ್ನು ರೈತನು ಮುಕ್ತವಾಗಿ ಮಾರುಕಟ್ಟೆಗೆ ತರಲು ಪೊಲೀಸರು ಚೆಕ್ ಪೋಸ್ಟ್ ನಲ್ಲಿ ತಡೆಯುತ್ತಿರುವ ಬಗ್ಗೆ ಗಮನಕ್ಕೆ ಬಂತು. ಹಾಗಾಗಿ ನಾನು ಮುಖ್ಯಮಂತ್ರಿಗಳ ಜೊತೆ ಮಾತನಾಡಿ ರೈತರಿಗೆ ಬೆಳೆ ಸಾಗಿಸಲು ಸಮಸ್ಯೆಯಾಗದಂತೆ ನೋಡಿಕೊಂಡಿದ್ದರ ಫಲವಾಗಿ 2 ರೂಪಾಯಿ ಇದ್ದ ಟೊಮೇಟೊ ಬೆಲೆ 16 ರೂಪಾಯಿಗೆ ಬಂದಿತು ಎಂದು ತಿಳಿಸಿದರು.

ರಾಜ್ಯ ಸರ್ಕಾರ ಯಾವುದೇ ಕಾರಣಕ್ಕೂ ಎಪಿಎಂಸಿ ಮುಚ್ಚುವುದಿಲ್ಲ. ಜೊತೆಗೆ ಇನ್ನೂ ಹೆಚ್ಚಿನ ಮೂಲಭೂತ ಸೌಕರ್ಯ ಒದಗಿಸಲು ಒತ್ತು ಕೊಡಲಾಗುವುದು. ಈ ಬಗ್ಗೆ ಮುಖ್ಯಮಂತ್ರಿಗಳ ಜೊತೆಗೆ ಮಾತನಾಡಿ ಮತ್ತಷ್ಟು ಅಭಿವೃದ್ಧಿ ಮಾಡುತ್ತೇವೆ ಎಂದು ಸಚಿವರಾದ ಸೋಮಶೇಖರ್ ತಿಳಿಸಿದರು.

ಮುಖ್ಯಮಂತ್ರಿಗಳು ಈಗಾಗಲೇ ಎಲ್ಲ ರೈತ ಮುಖಂಡರು ಹಾಗೂ ರೈತರ ಜೊತೆ ಚರ್ಚೆ ನಡೆಸಿ ಒಪ್ಪಿಗೆ ಪಡೆದೇ ಆರ್ಡಿನನ್ಸ್ ಹೊರಡಿಸಿದ್ದಾರೆ. ಆದರೆ, ವಿರೋಧ ಪಕ್ಷದವರು ಕೇವಲ ವಿರೋಧ ಮಾಡುವ ಸಲುವಾಗಿಯೇ ಮಾತನಾಡುತ್ತಿದ್ದಾರೆ. ಹೀಗಾಗಿ ಕಾಯ್ದೆಯನ್ನು ಮತ್ತೊಮ್ಮೆ ಅಧಿವೇಶನದಲ್ಲಿ ತಂದು ಒಪ್ಪಿಗೆ ಪಡೆದು ಜಾರಿ ಮಾಡುತ್ತೇವೆ ಎಂದು ಸಚಿವರಾದ ಎಸ್.ಟಿ.ಎಸ್.ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!