- Advertisement -
- Advertisement -
ಬೆಂಗಳೂರು: ಹಲವು ದಿನಗಳಿಂದ ಚರ್ಚೆಯಲ್ಲಿದ್ದ ವಿಷಯ ಇತ್ಯರ್ಥ ಕಂಡಿದೆ. ನಿಗದಿಯಾದಂತೆ ದಿವಂಗತ ಐಎಎಸ್ ಅಧಿಕಾರಿ ಡಿ.ಕೆ ರವಿ ಪತ್ನಿ ಕುಸುಮಾ ಅವರು ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಯಾದರು.
ವಿಪಕ್ಷ ನಾಯಕ ಸಿದ್ದರಾಮಯ್ಯ,ಕುಸುಮಾ ರವಿ ತಂದೆ, ಜೆಡಿಎಸ್ ಮುಖಂಡ ಹನುಮಂತರಾಯಪ್ಪ, ಮಾಜಿ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಂಸದ ಡಿ ಕೆ ಸುರೇಶ್ ಉಪಸ್ಥಿತಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಕಚೇರಿಯಲ್ಲಿ ಕುಸುಮಾ ರವಿ ಕಾಂಗ್ರೆಸ್ ಸದಸ್ಯತ್ವ ಸ್ವೀಕರಿಸಿದರು. ಆರ್. ಆರ್. ನಗರ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಿಂದ ಕುಸುಮಾ ರವಿ ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿದೆ.
- Advertisement -