Saturday, June 13, 2026
Homeಕರಾವಳಿಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

ಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆಯುತ್ತಿದ್ದ ವ್ಯಕ್ತಿಯ ಬಂಧನ

- Advertisement -
- Advertisement -

ಬಂಟ್ವಾಳ: ಗಾಂಜಾದಿಂದ ಎಣ್ಣೆ ತೆಗೆದು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ವಿಟ್ಲ ಠಾಣೆಯ ಪೊಲೀಸರ ತಂಡ ಬಂಧಿಸಿ ಸುಮಾರು 80ಸಾವಿರ ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆದ ಘಟನೆ ವಿಟ್ಲ ಕಸಬಾ ಗ್ರಾಮದಲ್ಲಿ ನಡೆದಿದೆ.

ವಿಟ್ಲ ಕಸಬಾ ಗ್ರಾಮದ ಉಕ್ಕುಡ ನಿವಾಸಿ ಅಬ್ದುಲ್ ಖಾದರ್ ಯಾನೆ ಅದ್ದು (25) ಬಂಧಿತ ಆರೋಪಿ. ಬಂಧಿತನಿಂದ ಸುಮಾರು 300 ಗ್ರಾಂ ಗಾಂಜಾ ಎಣ್ಣೆಯನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಜತೆಗೆ 40 ಗ್ರಾಂ ಮೊಗ್ಗು – ಕಾಯಿ ಮಿಶ್ರಿತ ಗಾಂಜಾವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಅಕ್ರಮವಾಗಿ ಮಾದಕ ವಸ್ತುಗಳನ್ನು ಸಂಗ್ರಹ ಮಾಡಿ ಮಾರಾಟ ಮಾಡುವ ಮಾಹಿತಿ ಹಿನ್ನಲೆಯಲ್ಲಿ ಬಂಟ್ವಾಳ ವೃತ್ತ ನಿರೀಕ್ಷಕ ಟಿ. ಡಿ. ನಾಗರಾಜ್ ಅವರನ್ನೊಳಗೊಂಡ ಅಪರಾಧ ಪತ್ತೆ ದಳ ಹಾಗೂ ವಿಟ್ಲ ಠಾಣೆಯ ಸಿಬ್ಬಂಧಿಗಳ ಜತೆಗೆ ದಾಳಿ ನಡೆಸಲಾಗಿದೆ. ಈ ಸಂದರ್ಭದಲ್ಲಿ ಈತ ಅನುಮಾನಾಸ್ಪದವಾಗಿ ವರ್ತಿಸಿದ್ದರಿಂದ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದಾಗ ಗಾಂಜಾ ಎಣ್ಣೆ ತಯಾರಿಸಿ ಮಾರಾಟ ಮಾಡುವ ಬಗ್ಗೆ ಒಪ್ಪಿಕೊಂಡಿದ್ದಾನೆ.

ಕಾರ್ಯಾಚರಣೆಯಲ್ಲಿ ವಿಟ್ಲ ಠಾಣಾ ಉಪನಿರೀಕ್ಷಕ ವಿನೋದ್ ಎಸ್. ಕೆ., ಬಂಟ್ವಾಳ ಸಂಚಾರಿ ಠಾಣೆಯ ಉಪನಿರೀಕ್ಷಕ ರಾಜೇಶ್ ಕೆ. ವಿ., ವಿಟ್ಲ ಪ್ರೊಬೆಷನರಿ ಉಪನಿರೀಕ್ಷಕ ಕೃಷ್ಣಕಾಂತ್, ಸಿಬ್ಬಂದಿಗಳಾದ ಗೋಣಿಬಸಪ್ಪ, ಕುಮಾರ್, ವಿವೇಕ್, ವಿಟ್ಲ ಸಿಬ್ಬಂದಿಗಳಾದ ಕೆ. ಟಿ. ಜಯರಾಮ, ಪ್ರಸನ್ನ, ಲೋಕೇಶ್, ಪ್ರತಾಪ, ವಿನಾಯಕ ಭಾಗವಹಿಸಿದ್ದರು.

- Advertisement -

Latest News

error: Content is protected !!