- Advertisement -
![]()
- Advertisement -
ಬೆಂಗಳೂರು: ನಿನ್ನೆ ನಡೆದ ದಾಳಿ ವೇಳೆ ಸಿಬಿಐ ಅಧಿಕಾರಿಗಳು ನನ್ನ ಪಿಎಗೆ ಹೊಡೆದಿದ್ದಾರೆ,ನನ್ನ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದಾರೆ. ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಗಂಭೀರ ಆರೋಪ ಮಾಡಿದ್ದರು.
ಇನ್ನೊಂದೆಡೆ, ಟ್ವೀಟ್ ಮೂಲಕ ಸಿಬಿಐ ಅಧಿಕಾರಿಗಳಿಗೆ ಧನ್ಯವಾದ ಸಲ್ಲಿಸಿರುವ ಅವರ ಸಹೋದರ, ಸಂಸದ ಡಿ.ಕೆ.ಸುರೇಶ್, ಕನಕಪುರ, ಬೆಂಗಳೂರು ಮತ್ತು ದೆಹಲಿಯ ನಮ್ಮ ಮನೆ ಮತ್ತು ಕಚೇರಿಗಳಿಗೆ ಬಂದು ಯಾವುದೇ ಕಿರುಕುಳ ನೀಡದೇ ವೃತ್ತಿಪರವಾಗಿ ನಡೆದುಕೊಂಡರು ಎಂದಿದ್ದಾರೆ. ಅಣ್ಣ ತಮ್ಮಂದಿರ ಈ ಹೇಳಿಕೆ ಈಗ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು ಸಾಮಾಜಿಕ ಜಾಲ ತಾಣಗಳಲ್ಲಿ ಸದ್ದು ಮಾಡುತ್ತಿದೆ.
- Advertisement -


