Thursday, June 4, 2026
Homeತಾಜಾ ಸುದ್ದಿಬೆಂಗಳೂರಿಗೆ ಬರುವ ವಿಮಾನದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ...

ಬೆಂಗಳೂರಿಗೆ ಬರುವ ವಿಮಾನದಲ್ಲೇ ಗಂಡು ಮಗುವಿಗೆ ಜನ್ಮ ನೀಡಿದ ಮಹಿಳೆ…

- Advertisement -
- Advertisement -

ಬೆಂಗಳೂರು: ನಾವೆಲ್ಲಾ ಬಸ್ ನಲ್ಲಿ, ರೈಲಿನಲ್ಲಿ, ಇಲ್ಲ ಬೇರೆ ಯಾವುದೋ ವಾಹನದಲ್ಲಿ ಹೆರಿಗೆಯಾಗಿರೋದನ್ನು ನೋಡಿದ್ದೇವೆ. ಕೇಳಿದ್ದೇವೆ. ಆದರೆ ವಿಮಾನದಲ್ಲೇ ಮಹಿಳೆಯೊಬ್ಬರಿಗೆ ಹೆರಿಗೆಯಿಗಿದೆ. ಯೆಸ್…ದೆಹಲಿಯಿಂದ ಬೆಂಗಳೂರಿಗೆ ಬರುತ್ತಿದ್ದ ಗರ್ಭಿಣಿಯೊಬ್ಬರು ವಿಮಾನದಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.

ನಿನ್ನೆ ಸಂಜೆ ದೆಹಲಿಯಿಂದ ಬೆಂಗಳೂರಿಗೆ ಹೊರಟ್ಟಿದ್ದ ಇಂಡಿಗೋ ವಿಮಾನದಲ್ಲಿ ಗರ್ಭಿಣಿ ಹತ್ತಿದ್ದರು. ದಾರಿ ಮಧ್ಯೆ ಅವರಿಗೆ ಹೆರಿಗೆ ನೋವಾಗಿದೆ. ಈ ವೇಳೆ ವಿಮಾನದಲ್ಲಿ ಪ್ರಸೂತಿ ತಜ್ಞೆ ಬೆಂಗಳೂರಿನ ಕ್ಲೌಡ್‌ ನೈನ್‌ ಆಸ್ಪತ್ರೆಯ ಡಾ. ಶೈಲಜಾ ವಲ್ಲಭನಿ ಪ್ರಯಾಣಿಸುತ್ತಿದ್ದರು. ಹೆರಿಗೆ ನೋವಾಗುತ್ತಿದ್ದಂತೆ ಇಂಡಿಗೋ ಸಿಬ್ಬಂದಿ ಸಹಕಾರದಿಂದ ಡಾ. ಶೈಲಜಾ ಅವರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ.

ವಿಮಾನ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗುತ್ತಿದ್ದಂತೆ ಅಂಬುಲೆನ್ಸ್‌ ಸಿದ್ಧವಾಗಿ ನಿಂತಿತ್ತು. ಅಂಬುಲೆನ್ಸ್‌ ಮೂಲಕ ಮಹಿಳೆಯನ್ನು ಆಸ್ಪತ್ರೆಗೆ ಸಾಗಿಸಲಾಯಿತು.ಸಾಮಾಜಿಕ ಜಾಲತಾಣದಲ್ಲಿ ಈಗ ಪ್ರಯಾಣಿಕರು ಈ ವಿಚಾರವನ್ನು ಹಂಚಿಕೊಂಡು ವೈದ್ಯರಿಗೆ ಮತ್ತು ಇಂಡಿಗೋ ಸಿಬ್ಬಂದಿಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.

- Advertisement -

Latest News

error: Content is protected !!