Thursday, June 25, 2026
Homeಕರಾವಳಿಕಡಬ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ..!

ಕಡಬ: ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ವ್ಯಕ್ತಿ ನದಿಯಲ್ಲಿ ಶವವಾಗಿ ಪತ್ತೆ..!

- Advertisement -
- Advertisement -

ಕಡಬ: ಕಳೆದ ಎರಡು ದಿನಗಳ ಹಿಂದೆ ಮನೆಯಿಂದ ಹೊರಟು ನಾಪತ್ತೆಯಾಗಿದ್ದ ಯುವಕನ ಶವ ಹೊಸಮಠ ಹೊಳೆಯಲ್ಲಿ ಪತ್ತೆಯಾಗಿದೆ.

ಮೃತರನ್ನು ಕುಟ್ರುಪಾಡಿ ಗ್ರಾಮದ ಹೊಸಮಠ ಚೆವುಡೇಲು ನಿವಾಸಿ ಪೊಡಿಯ ಎಂಬವರ ಅವಿವಾಹಿತ ಪುತ್ರ ದಿನೇಶ್ ಎಂದು ಗುರುತಿಸಲಾಗಿದೆ. ಎರಡು ದಿನಗಳ ಹಿಂದೆ ದಿನೇಶ್ ತನ್ನ ಮನೆಯಿಂದ ನಾಪತ್ತೆಯಾಗಿದ್ದರು, ವಿಷಯ ತಿಳಿದ ಮನೆಯವರು ವಿವಿಧ ಕಡೆಗಳಲ್ಲಿ ಹುಡುಕಾಡಿದರೂ ಇವರ ಅವರ ಸುಳಿವು ಪತ್ತೆಯಾಗಿರಲಿಲ್ಲ.

ಇದೀಗ ಹೊಸಮಠ ಹೊಳೆಯ ರಾಮಕಲ್ಲು ಎಂಬಲ್ಲಿ ಮೃತ ದೇಹ ಪತ್ತೆಯಾಗಿದೆ. ದಿನೇಶ್ ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಮೃತದೇಹವನ್ನು ಕಡಬ ಪೋಲಿಸರ ಸಮ್ಮುಖದಲ್ಲಿ ಕಡಬ ಸಮುದಾಯ ಆಸ್ಪತ್ರೆಗೆ ತರಲಾಗಿದ್ದು, ಮೃತದೇಹದ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ.

- Advertisement -

Latest News

error: Content is protected !!