Thursday, June 4, 2026
Homeತಾಜಾ ಸುದ್ದಿವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತ- ಸುರೇಶ್ ಕುಮಾರ್ ಸ್ಪಷ್ಟನೆ

ವಿದ್ಯಾಗಮ ಯೋಜನೆ ತಾತ್ಕಾಲಿಕವಾಗಿ ಸ್ಥಗಿತ- ಸುರೇಶ್ ಕುಮಾರ್ ಸ್ಪಷ್ಟನೆ

- Advertisement -
- Advertisement -

ಬೆಂಗಳೂರು: “ವಿದ್ಯಾಗಮ” ಕಾರ್ಯಕ್ರಮದ ಕುರಿತು ಕೆಲವು ವಲಯಗಳಲ್ಲಿ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗಿರುವುದರಿಂದ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ವಿದ್ಯಾಗಮ ಯೋಜನೆ ಆರಂಭವಾದ ನಂತರ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಕೋವಿಡ್-19 ಪಾಸಿಟಿವ್ ಪ್ರಕರಣಗಳು ಹೆಚ್ಚಾಗುತ್ತಿದೆ ಎಂದು ಸರ್ಕಾರದ ಮೇಲೆ ವಿವಿಧ ವಲಯಗಳಲ್ಲಿ ಆಕ್ರೋಶ ವ್ಯಕ್ತವಾಗಿತ್ತು.ಇದೀಗ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿದ್ಯಾಗಮ ಯೋಜನೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ.

ವಿದ್ಯಾಗಮ ಸಮಾಜದ ಕೆಳಸ್ಥರದ ಆರ್ಥಿಕವಾಗಿ ಹಿಂದುಳಿದಿರುವ ಕುಟುಂಬಗಳ ಮಕ್ಕಳ ಹಿತವನ್ನು ಮನದಲ್ಲಿ ಇಟ್ಟುಕೊಂಡು ಯೋಜಿಸಿರುವ ಕಾರ್ಯಕ್ರಮ. ಆದರೂ ವಿವಿಧ ವಲಯಗಳಿಂದ ಪ್ರಕಟವಾಗುತ್ತಿರುವ ಕಾಳಜಿಗೆ ಮನ್ನಣೆ ಕೊಟ್ಟು ಶಿಕ್ಷಣ ಇಲಾಖೆ ವಿದ್ಯಾಗಮ‌ ಕಾರ್ಯಕ್ರಮವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲು ನಿರ್ಧರಿಸಿ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದಿದ್ದಾರೆ.

- Advertisement -

Latest News

error: Content is protected !!