Friday, June 5, 2026
Homeತಾಜಾ ಸುದ್ದಿಶಾಸಕ ರಾಮದಾಸ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

ಶಾಸಕ ರಾಮದಾಸ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು

- Advertisement -
- Advertisement -

ಮೈಸೂರು: ಮೈಸೂರಿನ ಕೃಷ್ಣರಾಜ ಕ್ಷೇತ್ರದ ಬಿಜೆಪಿ ಶಾಸಕ, ಮಾಜಿ ಸಚಿವ ಎಸ್.ಎ.ರಾಮದಾಸ್ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಇಂದು ಮುಂಜಾನೆ 5 ಗಂಟೆ ಹೊತ್ತಿಗೆ ರಾಮದಾಸ್ ಅವರಿಗೆ ಏಕಾಏಕಿ ಉಸಿರಾಟದಲ್ಲಿ ತೊಂದರೆ ಕಾಣಿಸಿಕೊಂಡಿದೆ.ಕೂಡಲೇ ಮೈಸೂರಿನ ಜಯದೇವ ಆಸ್ಪತ್ರೆಗೆ ಶಾಸಕ ದಾಖಲಾಗಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲು ಮೈಸೂರಿನ ಜಯದೇವ ಆಸ್ಪತ್ರೆ ವೈದ್ಯರು ಮುಂದಾಗಿದ್ದಾರೆ ಎನ್ನಲಾಗಿದೆ.

ಸದ್ಯ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಆಸ್ಪತ್ರೆಯಲ್ಲಿ ರಾಮದಾಸ್ ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಿಂದ ಮೈಸೂರು ದಸರಾ ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸಿದ್ದರು. ಇದೀಗ ದಿಢೀರ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಪರೀಕ್ಷಾ ವರದಿ ಇನ್ನೂ ಬರಬೇಕಿದೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ. ಕಳೆದ ಫೆಬ್ರವರಿ ತಿಂಗಳಲ್ಲಿಯೂ ಕೂಡ ರಾಮದಾಸ್ ಅವರು ಮೈಸೂರಿನ ಜಯದೇವ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು

- Advertisement -

Latest News

error: Content is protected !!