- Advertisement -
- Advertisement -
ಚಿತ್ರದುರ್ಗ:ಇಲ್ಲಿನ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ – ಗೋರಲಡುಕು ಸಮೀಪದ ಓಂ ಶಕ್ತಿ ಹೋಟೆಲ್ ಹತ್ತಿರ ರಾಷ್ಟ್ರೀಯ ಹೆದ್ದಾರಿ ಬಳಿ ನಿನ್ನೆ ತಡರಾತ್ರಿ ಭೀಕರ ಅಪಘಾತವೊಂದು ಸಂಭವಿಸಿದೆ. ಪೇಂಟ್ ಡಬ್ಬಗಳನ್ನು ತುಂಬಿಕೊಂಡು ಹೋಗುತ್ತಿದ್ದ ಲಾರಿಗೆ ಮತ್ತೊಂದು ಲಾರಿ ಡಿಕ್ಕಿಯಾದ ಪರಿಣಾಮವಾಗಿ ಲಾರಿ ಹೊತ್ತಿ ಉರಿದಿದೆ.
ಮುಂದೆ ಚಲಿಸುತ್ತಿದ್ದ ಕಂಟೇನರ್ ಲಾರಿಗೆ ಹಿಂಬದಿಯಿಂದ ಬಂದ ಪೇಂಟ್ ತುಂಬಿದ್ದ ಲಾರಿ ಡಿಕ್ಕಿ ಹೊಡೆದ ಪರಿಣಾಮವಾಗಿ ಬೆಂಕಿ ಹೊತ್ತಿಕೊಂಡಿತ್ತು.ಅದೃಷ್ಟವಶಾತ್ ಲಾರಿ ಚಾಲಕ ಹಾಗೂ ಕ್ಲೀನರ್ ಜಿಗಿದ ಹಿನ್ನೆಲೆಯಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಸ್ಥಳಕ್ಕೆ ಅಗ್ನಿಶಾಮಕ ದಳ ತೆರಳಿ ಉರಿಯುವ ಬೆಂಕಿಯನ್ನು ನಂದಿಸಿದ್ದಾರೆ. ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
- Advertisement -