Wednesday, July 2, 2025
Homeಕರಾವಳಿ"ಕಟೀಲ್ ಒಬ್ಬ ಕಾಡು ಮನುಷ್ಯ,ನಾಡಿನ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಆತನನ್ನು ಕಾಡಿಗೆ ಬಿಡಬೇಕು"- ಸಿದ್ಧರಾಮಯ್ಯ!…

“ಕಟೀಲ್ ಒಬ್ಬ ಕಾಡು ಮನುಷ್ಯ,ನಾಡಿನ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಆತನನ್ನು ಕಾಡಿಗೆ ಬಿಡಬೇಕು”- ಸಿದ್ಧರಾಮಯ್ಯ!…

spot_img
- Advertisement -
- Advertisement -

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಒಬ್ಬ ಕಾಡು ಮನುಷ್ಯ, ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಆತನನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿ ತಕ್ಷಣ ಕಾಡಿಗೆ ಕೊಂಡು ಹೋಗಿ ಬಿಡಬೇಕು. ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಿರುದ್ಧ ಕಿಡಿ ಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮ ಪಕ್ಷ ಸೇರಬೇಕಾದರೆ ಹತ್ತು ವರ್ಷ ಪಕ್ಷದ ಕಚೇರಿಯ ಕಸಗುಡಿಸಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದ್ದರು. ಈ ನಳಿನ್ ಕುಮಾರ್ ಕಟೀಲನ್ನು ಇನ್ನು ಒಂದು ಹತ್ತು ವರ್ಷ ಕಚೇರಿಯ ಕಸಗುಡಿಸಲು ಹಚ್ಚಿದರೆ ಒಳಿತು ಎಂದಿದ್ದಾರೆ.
ನಳಿನ್ ಕುಮಾರ್ ಕಟೀಲು ನಾಲಗೆಯಲ್ಲಿ ಮಾತ್ರ ಅಲ್ಲ, ಬೆನ್ನಿನಲ್ಲಿಯೂ ಎಲುಬು ಇಲ್ಲ.

ಈ ಬೆನ್ನೆಲುಬಿಲ್ಲದ ಅಧ್ಯಕ್ಷನಿಗೆ ತಮ್ಮದೇ ಪಕ್ಷದ ಶಾಸಕರು ಪ್ರತಿದಿನ ತಮ್ಮದೇ ಮುಖ್ಯಮಂತ್ರಿ ವಿರುದ್ಧ ಟೀಕಾಪ್ರಹಾರ ಮಾಡುತ್ತಿರುವಾಗ ಕಾಡಿಗೆ ಹುಲಿ ಓಡಿಸುತ್ತೇನೆ,ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ ತಮ್ಮವರ ವಿರುದ್ಧ ಕ್ರಮಕೈಗೊಳ್ಳುವ ತಾಕತ್ ಇಲ್ಲ. ನಮ್ಮ ಪಕ್ಷದ ಬಗ್ಗೆ ಕೂಗಾಡ್ತಾರೆ ಎಂದು ಹೇಳಿದರು.

- Advertisement -
spot_img

Latest News

error: Content is protected !!