- Advertisement -
![]()
- Advertisement -
ಉಡುಪಿ: ಪೊಲೀಸರೆಂದು ನಂಬಿಸಿ ಚಿನ್ನಾಭರಣ ದೋಚುತ್ತಿದ್ದ ಇರಾನಿ ಗ್ಯಾಂಗ್ ನ ನಾಲ್ವರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಈ ಖದೀಮರು ದೆಹಲಿ, ಮಹಾರಾಷ್ಟ್ರ, ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಲ್ಲಿ ತಾವು ಪೊಲೀಸರೆಂದು ಹೇಳಿ, ಚಿನ್ನಾಭರಣ ದೋಚಿ ಪರಾರಿಯಾಗುತ್ತಿದ್ದರು.
ಒಂಟಿಯಾಗಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯರು ಮತ್ತು ಪುರುಷರನ್ನೇ ಟಾರ್ಗೆಟ್ ಮಾಡುತ್ತಿದ್ದ ಆರೋಪಿಗಳು ಅವರನ್ನು ದೋಚುತ್ತಿದ್ದರು. ನಾವು ಪೊಲೀಸರು, ಮುಂದೆ ಗಲಾಟೆ ಆಗಿದೆ, ಚಿನ್ನಾಭರಣ ಬ್ಯಾಗಿನಲ್ಲಿ ಹಾಕಿಕೊಂಡು ಹೋಗಿ ಎಂದು ಹೇಳಿ, ಅವರಲ್ಲಿದ್ದ ಚಿನ್ನಾಭರಣಗಳನ್ನು ತೆಗೆದು ಬ್ಯಾಗಿನಲ್ಲಿ ಹಾಕಿ ಕೊಡುವುದಾಗಿ ನಂಬಿಸಿ, ಅದನ್ನು ದೋಚುತ್ತಿದ್ದರು ಎಂದು ತಿಳಿದುಬಂದಿದೆ.
ಇನ್ನು ಬಂಧಿತ ಆರೋಪಿಗಳನ್ನು, ಮಹಾರಾಷ್ಟ್ರದ ಜಾಕೀರ್ ಹುಸೇನ್ (26), ಕಂಬರ್ ರಹೀಂ ಮಿರ್ಜಾ(32), ಅಕ್ಷಯ್ ಸಂಜಯ್ ಗೋಸಾವಿ(22), ಶಾಹರುಖ್ ಬಂದೆನವಾಜ್ ಶೇಖ್ (24) ಎಂದು ಗುರುತಿಸಲಾಗಿದೆ.
- Advertisement -


