Thursday, June 4, 2026
Homeತಾಜಾ ಸುದ್ದಿBREAKING: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಬಂಧನ

BREAKING: ಇತ್ತೀಚೆಗಷ್ಟೇ ಬಿಜೆಪಿ ಸೇರಿದ್ದ ನಟಿ ಖುಷ್ಬೂ ಬಂಧನ

- Advertisement -
- Advertisement -

ಚೆನ್ನೈ: ಇತ್ತೀಚೆಗಷ್ಟೇ ಬಿಜೆಪಿ ಸೇರ್ಪಡೆಯಾಗಿದ್ದ ಖ್ಯಾತ ನಟಿ ಖುಷ್ಬೂ ಸುಂದರ್ ಅವರನ್ನು ಬಂಧಿಸಲಾಗಿದೆ. ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ವಿಸಿಕೆ ನಾಯಕ ಥೋಲ್ ತಿರುಮಾವಾಲವನ್ ವಿರುದ್ಧದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಚಿದಂಬರಂಗೆ ತೆರಳುತ್ತಿದ್ದ ಸಂದರ್ಭದಲ್ಲಿ ಮುಂಜಾಗ್ರತಾ ಕ್ರಮವಾಗಿ ಚೆನ್ನೈ ಹೊರವಲಯದಲ್ಲಿರುವ ಮುತ್ತುಕಾಡು ಬಳಿ ಅವರನ್ನು ಮಂಗಳವಾರ ಬೆಳಿಗ್ಗೆ ಬಂಧಿಸಲಾಗಿದೆ.

ಕಾನೂನು ಮತ್ತು ಸುವ್ಯವಸ್ಥೆಗೆ ಸಮಸ್ಯೆಯಾಗಲಿರುವ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಅನುಮತಿ ನಿರಾಕರಿಸಿ ಅವರನ್ನು ವಶಕ್ಕೆ ಪಡೆಯಲಾಗಿದೆ. ಖುಷ್ಬೂ ಅವರ ಬಂಧನದ ಬೆನ್ನಲ್ಲೇ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೆಟಿ ರಾಘವನ್ ಅವರನ್ನು ಮೇಲ್ಮರುವಥುರ್ ಸಮೀಪದ ಅಥುರ್ ಟೋಲ್‌ಗೇಟ್‌ನಲ್ಲಿ ಬಂಧಿಸಿದ್ದಾರೆ. ಮುನ್ನೆಚ್ಚರಿಕೆ ಕ್ರಮದಿಂದ ಅವರನ್ನು ಬಂಧಿಸಲಾಗಿದ್ದು, ಬಳಿಕ ಬಿಡುಗಡೆ ಮಾಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

‘ಬಂಧನಕ್ಕೆ ಒಳಗಾಗಿದ್ದೇನೆ.. ಪೊಲೀಸ್ ವ್ಯಾನ್‌ನಲ್ಲಿ ಕರೆದೊಯ್ಯಲಾಗುತ್ತಿದೆ. ಮಹಿಳೆಯರ ಗೌರವಕ್ಕಾಗಿ ನಮ್ಮ ಕೊನೆ ಉಸಿರಿನವರೆಗೂ ಹೋರಾಡುತ್ತೇವೆ. ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿ ಅವರು ಯಾವಾಗಲೂ ಮಹಿಳೆಯರ ಸುರಕ್ಷತೆ ಬಗ್ಗೆ ಮಾತನಾಡುತ್ತಾರೆ. ನಾವು ಅವರ ಹಾದಿಯಲ್ಲಿ ಸಾಗುತ್ತಿದ್ದೇವೆ. ಕೆಲವು ಕೆಟ್ಟ ವ್ಯಕ್ತಿಗಳ ದೌರ್ಜನ್ಯಕ್ಕೆ ನಾವು ಮಂಡಿಯೂರುವುದಿಲ್ಲ. ಭಾರತ್ ಮಾತಾ ಕಿ ಜೈ’ ಎಂದು ಖುಷ್ಬೂ ಟ್ವೀಟ್ ಮಾಡಿದ್ದಾರೆ.

- Advertisement -

Latest News

error: Content is protected !!