Friday, June 5, 2026
Homeತಾಜಾ ಸುದ್ದಿಗ್ರಾಮ ಪಂಚಾಯಿತಿ ಸದಸ್ಯನ ಕೊಲೆ- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

ಗ್ರಾಮ ಪಂಚಾಯಿತಿ ಸದಸ್ಯನ ಕೊಲೆ- ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು

- Advertisement -
- Advertisement -

ಕಲಬುರಗಿ:ಇಲ್ಲಿನ ಆಳಂದ ತಾಲೂಕಿನ ಕಡಗಂಚಿ ಗ್ರಾಮ ಪಂಚಾಯಿತಿ ಸದಸ್ಯರೊಬ್ಬರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿರುವ ಘಟನೆ ವರದಿಯಾಗಿದೆ.ಶಿವಲಿಂಗಪ್ಪ ಭೂಶೆಟ್ಟಿ (53) ಕೊಲೆಯಾದ ಗ್ರಾಮ ಪಂಚಾಯಿತಿ ಸದಸ್ಯ.‌

ಕಳೆದ ರಾತ್ರಿ ಶಿವಲಿಂಗಪ್ಪ ಭೂಶೆಟ್ಟಿಯವರು ಮನೆಯ ಬಳಿ ನಿಂತಿದ್ದಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇವರು ಇಲ್ಲಿನ ಕೈಲಾಶ್ ನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿದ್ದಾರೆ.

- Advertisement -

Latest News

error: Content is protected !!