Friday, June 5, 2026
Homeತಾಜಾ ಸುದ್ದಿಆರ್. ಆರ್. ನಗರ ಉಪಚುನಾವಣೆಯಲ್ಲಿ ಕೇಸರಿ ಮಾಸ್ಕ್ ವಿವಾದ- ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಆಕ್ಷೇಪ!…

ಆರ್. ಆರ್. ನಗರ ಉಪಚುನಾವಣೆಯಲ್ಲಿ ಕೇಸರಿ ಮಾಸ್ಕ್ ವಿವಾದ- ಕಾಂಗ್ರೆಸ್ ಕಾರ್ಯಕರ್ತರಿಂದ ತೀವ್ರ ಆಕ್ಷೇಪ!…

- Advertisement -
- Advertisement -

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಯ ಮತದಾನದ ವೇಳೆ ಇಲ್ಲಿನ ಆರ್. ಆರ್. ನಗರ ವ್ಯಾಪ್ತಿಯ ಕನ್ಯಾಕುಮಾರಿ ಶಾಲೆಯ ಮತಗಟ್ಟೆ ಬಳಿ ಕೇಸರಿ ಬಣ್ಣದ ಮಾಸ್ಕ್ ವಿವಾದಕ್ಕೆ ಕಾರಣವಾಗಿದೆ. ಮತದಾನ ಆರಂಭವಾಗುವ ಮುನ್ನ ಬಿಜೆಪಿ ಕಾರ್ಯಕರ್ತರು ಕೇಸರಿ ಬಣ್ಣದ ಮಾಸ್ಕ್ ವಿತರಣೆ ಮಾಡಿದ್ದರು. ಅರೆಸೇನಾಪಡೆ ಸಿಬ್ಬಂದಿ ಅದನ್ನು ಧರಿಸಿ ಕಾರ್ಯ ನಿರ್ವಹಣೆ ಮಾಡುತ್ತಿದ್ದರು. ಇದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆಕ್ಷೇಪ ವ್ಯಕ್ತಪಡಿಸಿದರು.

ಈ ವೇಳೆ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. ನಂತರದಲ್ಲಿ ಕೇಸರಿ ಮಾಸ್ಕ್ ತೆಗೆದ ಭದ್ರತಾ ಸಿಬ್ಬಂದಿಗಳು ಸರ್ಜಿಕಲ್ ಮಾಸ್ಕ್ ಧರಿಸಿ ಕಾರ್ಯ ನಿರ್ವಹಣೆ ಮಾಡುತ್ತಿದ್ದಾರೆ. ತು.

- Advertisement -

Latest News

error: Content is protected !!