Sunday, June 7, 2026
Homeತಾಜಾ ಸುದ್ದಿಪತ್ನಿಯ ನಿಧನವಾದ ಕೆಲವೇ ದಿನಗಳಲ್ಲಿ ಬಿಜೆಪಿ ಶಾಸಕ ಕೊರೊನಾಗೆ ಬಲಿ

ಪತ್ನಿಯ ನಿಧನವಾದ ಕೆಲವೇ ದಿನಗಳಲ್ಲಿ ಬಿಜೆಪಿ ಶಾಸಕ ಕೊರೊನಾಗೆ ಬಲಿ

- Advertisement -
- Advertisement -

ನವದೆಹಲಿ: ಉತ್ತರಾಖಂಡ ರಾಜ್ಯದ ಬಿಜೆಪಿ ಶಾಸಕ ಸುರೇಂದ್ರ ಸಿಂಗ್ ಜೀನಾ ಅವರನ್ನು ಕೊರೊನಾ ಬಲಿ ಪಡೆದುಕೊಂಡಿದೆ.ಕೋವಿಡ್ ನಿಂದಾಗಿ ಅವರು ಇಂದು ಸಾವನ್ನಪ್ಪಿದ್ದಾರೆ.

ಕಳೆದ 15 ದಿನಗಳ ಹಿಂದೆ ಸುರೇಂದ್ರ ಸಿಂಗ್ ಅವರಿಗೆ ಕೋವಿಡ್‌ ಸೋಂಕು ದೃಢಪಟ್ಟಿತ್ತು. ಇವರು ದೆಹಲಿಯ ಗಂಗಾರಾಮ್‌ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಿಸದೇ ಇಂದು ಬೆಳಗ್ಗೆ ಸುರೇಂದ್ರ ಸಿಂಗ್ ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

ಸುರೇಂದ್ರ ಸಿಂಗ್ ಅವರು ಉತ್ತರಾಖಂಡ ರಾಜ್ಯದ ಅಲ್ಮೋರಾ ಜಿಲ್ಲೆಯ ಸಾಲ್ಟ್‌ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದರು. ಕೆಲದಿನಗಳ ಹಿಂದಷ್ಟೆ ಇವರ ಪತ್ನಿ ಹೃದಯಾಘಾತದಿಂದ ಮೃತಪಟ್ಟಿದ್ದರು.

- Advertisement -

Latest News

error: Content is protected !!