Sunday, June 7, 2026
Homeತಾಜಾ ಸುದ್ದಿಅಕ್ಷರ ಮಾಂತ್ರಿಕ ಖ್ಯಾತಿಯ ಬರಹಗಾರ ರವಿಬೆಳೆಗೆರೆ ವಿಧಿವಶ..

ಅಕ್ಷರ ಮಾಂತ್ರಿಕ ಖ್ಯಾತಿಯ ಬರಹಗಾರ ರವಿಬೆಳೆಗೆರೆ ವಿಧಿವಶ..

- Advertisement -
- Advertisement -

ಬೆಂಗಳೂರು: ಹಿರಿಯ ಪತ್ರಕರ್ತ, ಹಾಯ್ ಬೆಂಗಳೂರು ಟ್ಯಾಬ್ಲಾಯ್ಡ್ ನ ನ ಸ್ಥಾಪಕ ರವಿ ಬೆಳೆಗೆರೆ (62) ನ.12 ರ ಮಧ್ಯರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ತಡರಾತ್ರಿ ಹೃದಯಾಘಾತಕ್ಕೆ ಒಳಗಾದ ಅವರನ್ನು ತಕ್ಷಣ ಆಸ್ಪತ್ರೆ ದಾಖಲಿಸಲಾಯಿತಾದರೂ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟರು.

 ಪಾರ್ಥಿವ ಶರೀರವನ್ನು ಇಂದು ಅಂತಿಮ ದರ್ಶನಕ್ಕೆ ಇಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ರವಿಬೆಳೆಗೆರೆ ಅವರು ಇಬ್ಬರು ಪತ್ನಿಯರಾದ ಲಲಿತಾ, ಯಶೋಮತಿ, ಮಕ್ಕಳಾದ ಚೇತನಾ, ಭಾವನ, ಕರ್ಣ ಹಾಗೂ ಹಿಮವಂತ ಸೇರಿ ಅಪಾರ ಬಂಧು, ಬಳಗ, ಅಭಿಮಾನಿಗಳನ್ನು ಅಗಲಿದ್ದಾರೆ.

ರವಿ ಬೆಳಗೆರೆ ಕನ್ನಡದ ಪ್ರಸಿದ್ಧ ಪತ್ರಕರ್ತರು ಹಾಗೂ ಪತ್ರಿಕೋದ್ಯಮಿ. ಹಾಯ್ ಬೆಂಗಳೂರ್ ಎಂಬ ವಾರಪತ್ರಿಕೆ ಹಾಗೂ ‘ಓ ಮನಸೇ’ ಪಾಕ್ಷಿಕ ಪತ್ರಿಕೆಯ ಸಂಪಾದಕರಾಗಿದ್ದಾರೆ. ಜೊತೆಗೆ ಅವರು ಕನ್ನಡ ಸಾಹಿತಿ, ಚಿತ್ರಕಥೆ ಬರಹಗಾರ, ಈ-ಟಿವಿ ಕನ್ನಡ ವಾಹಿನಿಯ ಜನಪ್ರಿಯ ಕ್ರೈಂ ಡೈರಿ ಕಾರ್ಯಕ್ರಮದ ನಿರೂಪಕರಾಗಿ ಹಾಗೂ ಜನಶ್ರೀ ವಾಹಿನಿಯ ಮುಖ್ಯಸ್ಥರಾಗಿ, ಕಾರ್ಯಕ್ರಮಗಳ ನಿರೂಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.

ಕನ್ನಡದಲ್ಲಿ ಹಲವಾರು ಪುಸ್ತಕಗಳನ್ನು ಬರೆದಿರುವ ಮತ್ತು ಭಾಷಾಂತರಿಸಿರುವ ರವಿ ಬೆಳಗೆರೆ, ಭಾವನಾ ಪ್ರಕಾಶನ, ಭಾವನಾ ಆಡಿಯೋ ರೀಚ್ ಮತ್ತು ಪ್ರಾರ್ಥನಾ ಶಾಲೆ ಯ ಸಂಸ್ಥಾಪಕ. ರವಿ ‘ಹಾಯ್ ಬೆಂಗಳೂರ್’ ಪತ್ರಿಕೆ ಪ್ರಾರಂಭಿಸುವ ಮುನ್ನ ಕರ್ಮವೀರ, ಸಂಯುಕ್ತ ಕರ್ನಾಟಕ ಮತ್ತು ಕಸ್ತೂರಿ ಪತ್ರಿಕೆಗಳಲ್ಲಿ ಕೆಲಸ ಮಾಡಿದ್ದರು.

- Advertisement -

Latest News

error: Content is protected !!