Tuesday, June 9, 2026
Homeಕರಾವಳಿಉಡುಪಿಉಡುಪಿ ಜನತೆಯ ಬೇಡಿಕೆಗಳಿಗೆ ಸ್ಪಂದಿಸುತ್ತಿರುವ ಮುಖ್ಯಮಂತ್ರಿಗಳಿಗೆ ಅಭಿನಂದನೆ- ಕೆ. ರಘುಪತಿ ಭಟ್

ಉಡುಪಿ ಜನತೆಯ ಬೇಡಿಕೆಗಳಿಗೆ ಸ್ಪಂದಿಸುತ್ತಿರುವ ಮುಖ್ಯಮಂತ್ರಿಗಳಿಗೆ ಅಭಿನಂದನೆ- ಕೆ. ರಘುಪತಿ ಭಟ್

- Advertisement -
- Advertisement -

ಉಡುಪಿ: ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರು ಸಚಿವ ಸಂಪುಟ ಸಭೆಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬ್ರಹ್ಮಾವರ ತಾಲೂಕಿನಲ್ಲಿ ಉಪ್ಪು ನೀರು ತಡೆ ಅಣೆಕಟ್ಟು ಸೇರಿದಂತೆ ಎರಡು ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ತಲಾ ರೂ. 35.00 ಕೋಟಿಯಂತೆ ಒಟ್ಟು ರೂ. 70.00 ಕೋಟಿಗೆಅನುಮೋದನೆ ನೀಡಿದ್ದಾರೆ.ಈ ಮೂಲಕ ಉಡುಪಿ ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ದೀಪಾವಳಿಯ ಬೃಹತ್ ಉಡುಗೊರೆಯನ್ನು ನೀಡಿದ್ದಾರೆ ಎಂದು ಶಾಸಕ ಕೆ. ರಘುಪತಿ ಭಟ್ ತಿಳಿಸಿದರು.

ಪತ್ರಕರ್ತರೊಂದಿಗೆ ಮಾತನಾಡಿದ ಅವರು ಕೊರೊನಾ ಆರ್ಥಿಕ ಸಂಕಷ್ಟದ ಈ ಸಂದರ್ಭದಲ್ಲಿಯೂ ಉಡುಪಿ ಜನತೆಯ ಬೇಡಿಕೆಗಳಿಗೆ ಸ್ಪಂದಿಸುತ್ತಿರುವ ಮುಖ್ಯಮಂತ್ರಿಯವರಿಗೆ ಉಡುಪಿ ಜನತೆಯ ಪರವಾಗಿ ಅಭಿನಂದನೆಯನ್ನು ಸಲ್ಲಿಸಿದರು.

ಈ ವೇಳೆ ಯೋಜನೆಗೆ ಸಂಭಂದಿಸಿದ ಪೂರಕವಾದ ವರದಿಯನ್ನು ತಯಾರಿಸಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸುವಲ್ಲಿ ಸಹಕರಿಸಿದ ಸಣ್ಣ ನೀರಾವರಿ ಸಚಿವ ಜೆ. ಸಿ. ಮಾಧುಸ್ವಾಮಿ ಅವರ ಸಹಕಾರವನ್ನು ಶಾಸಕರು ನೆನಪಿಸಿಕೊಂಡರು

- Advertisement -

Latest News

error: Content is protected !!