Saturday, June 6, 2026
Homeತಾಜಾ ಸುದ್ದಿನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ- ಸೈಬರ್ ಕ್ರೈಮ್ ಪೊಲೀಸರ ಮೊರೆಹೋದ...

ನಟ ವಿನೋದ್ ರಾಜ್ ಹೆಸರಲ್ಲಿ ನಕಲಿ ಫೇಸ್ ಬುಕ್ ಖಾತೆ- ಸೈಬರ್ ಕ್ರೈಮ್ ಪೊಲೀಸರ ಮೊರೆಹೋದ ವಿನೋದ್ ರಾಜ್

- Advertisement -
- Advertisement -

ಬೆಂಗಳೂರು: ಸಾಮಾಜಿಕ ಜಾಲ ತಾಣಗಳಲ್ಲಿ ಹಲವು ರೀತಿಯ ಮೋಸ ಪ್ರಕರಣಗಳು ದಾಖಾಲಾಗುತ್ತಲೇ ಇರುತ್ತವೆ. ಇದೀಗ ಅಂತಹುದೇ ಒಂದು ಪ್ರಕರಣ ದಾಖಲಾಗಿದ್ದು ಫೇಸ್ ಬುಕ್ ನಲ್ಲಿ ನಟ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ತೆರೆದು ಅಶ್ಲೀಲ ಫೋಟೋ ಅಪ್ಲೋಡ್ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ.

ನಟ ವಿನೋದ್ ರಾಜ್ ಈ ಕುರಿತಾಗಿ ದೂರು ನೀಡಿದ್ದು, ಉತ್ತರ ವಿಭಾಗದ ಸೈಬರ್ ಕ್ರೈಮ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.ಕಿಡಿಗೇಡಿಗಳು ಫೇಸ್ಬುಕ್ ನಲ್ಲಿ ವಿನೋದ್ ರಾಜ್ ಅವರ ಹೆಸರಲ್ಲಿ ನಕಲಿ ಖಾತೆ ಸೃಷ್ಟಿಸಿ, ತಮಗೆ ಬೇಕಾದಂತೆ ಅಶ್ಲೀಲ ಫೋಟೋಗಳನ್ನು ಅಪ್ಲೋಡ್ ಮಾಡಿ, ಅಸಭ್ಯ ಬರಹ ಪ್ರಕಟಿಸುತ್ತಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಾಹಿತಿ ತಿಳಿದ ಕೂಡಲೇ ವಿನೋದ್ ರಾಜ್ ಪೊಲೀಸರಿಗೆ ದೂರು ನೀಡಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದಾರೆ.

- Advertisement -

Latest News

error: Content is protected !!