Thursday, June 4, 2026
Homeತಾಜಾ ಸುದ್ದಿಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ- ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್...

ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ಪ್ರಕರಣ- ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ಬಂಧನ

- Advertisement -
- Advertisement -

ಬೆಂಗಳೂರು: ಬೆಂಗಳೂರಿನ ಡಿಜೆ ಹಳ್ಳಿ ಹಾಗೂ ಕೆಜಿ ಹಳ್ಳಿ ಗಲಭೆ ವೇಳೆ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆಗೆ ದಾಳಿ ನಡೆದಿತ್ತು. ಈ ಪ್ರಕರಣದ ಪ್ರಮುಖ ಆರೋಪಿ ಮಾಜಿ ಮೇಯರ್ ಸಂಪತ್ ರಾಜ್ ನನ್ನು ಸಿಸಿಬಿ ಪೊಲೀಸರು ಹಲವು ದಿನಗಳ ನಂತರ ಬಂಧಿಸಿದ್ದಾರೆ. ಕೊರೋನಾ ಪಾಸಿಟಿವ್ ಹಿನ್ನೆಲೆಯಲ್ಲಿ ಆಸ್ಪತ್ರೆ ಸೇರಿದ್ದ ಸಂಪತ್ ರಾಜ್ ಅಲ್ಲಿಂದ ಪರಾರಿಯಾಗಿದ್ದ. ಈತನನ್ನು ಸಿಸಿಬಿ ಪೊಲೀಸರು ಸತತ ಪ್ರಯತ್ನದ ನಂತರ ಬಂಧಿಸಿದ್ದಾರೆ.

ಕಳೆದ 22 ದಿನಗಳಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ಸಂಪತ್ ರಾಜ್ ನಿನ್ನೆ ತನ್ನ ಪುಲಕೇಶಿ ನಗರದ ಮನೆಗೆ ಬಂದಿದ್ದ ಈ ವೇಳೆ ಖಚಿತ ಮಾಹಿತಿ ಪಡೆದ ಪೊಲೀಸರು ಬಂಧಿಸಿದರು.ಈತ ನಾಗರಹೊಳೆ, ಕೇರಳ ಮುಂತಾದೆಡೆ ತಿರುಗುತ್ತಿದ್ದು ತಪ್ಪಿಸಿಕೊಂಡಿದ್ದ. ಆರೋಪಿಯನ್ನು ಇಂದು ಮಧ್ಯಾಹ್ನ ಸಿಸಿಬಿ ಪೊಲೀಸರು ನ್ಯಾಯಾಧೀಶರ ಮುಂದೆ ಹಾಜರುಪಡಿಸುವ ಸಾಧ್ಯತೆ ಇದೆ.

- Advertisement -

Latest News

error: Content is protected !!