Saturday, June 6, 2026
Homeಕರಾವಳಿಉಡುಪಿಉಡುಪಿ: ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿ ಮೋಸ, ಯುವಕನ ಬಂಧನ

ಉಡುಪಿ: ಮದುವೆಯಾಗುವುದಾಗಿ ಹೇಳಿ ದೈಹಿಕ ಸಂಬಂಧ ಬೆಳೆಸಿ ಮೋಸ, ಯುವಕನ ಬಂಧನ

- Advertisement -
- Advertisement -

ಉಡುಪಿ: ಮದುವೆಯಾಗುವುದಾಗಿ ನಂಬಿಸಿ ದೈಹಿಕವಾಗಿ ಬಳಸಿಕೊಂಡು ಮೋಸ ಮಾಡಿದ ಯುವಕನ ವಿರುದ್ಧ ನೊಂದ ಯುವತಿ ಉಡುಪಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕನೋರ್ವನನ್ನು ಪೊಲೀಸರು ಇಂದು ಬಂಧಿಸಿದ್ದಾರೆ.

ಪರ್ಕಳದ ಗಣೇಶ್(33) ಬಂಧಿತ ಆರೋಪಿ. ಈತ ಹಾಗೂ ಮಣಿಪಾಲದ ಯುವತಿ ಕಳೆದ 12ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಈತ ಪ್ರೀತಿಸಿದ ಯುವತಿಯ ಬದಲು ಕಾರ್ಕಳದ ಯುವತಿ ಜೊತೆ ಮದುವೆಗೆ ಸಿದ್ಧತೆ ನಡೆಸುತ್ತಿದ್ದ ಎನ್ನಲಾಗಿದೆ.

ಇದನ್ನು ವಿರೋಧಿಸಿ ಯುವತಿ, ಗಣೇಶ್ ಮನೆ ಮುಂದೆ ಹೋಗಿ ಪ್ರತಿಭಟನೆ ವ್ಯಕ್ತಪಡಿಸಿದ್ದರು. ಬಳಿಕ ನಡೆದ ನಾಟಕೀಯ ಬೆಳವಣಿಗೆಯಲ್ಲಿ ಗಣೇಶ್, ಇದೇ ವಿಚಾರವಾಗಿ ಪಿನಾಯಿಲ್ ಸೇವಿಸಿ ಅಸ್ವಸ್ಥಗೊಂಡು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದನು. ಇದೀಗ ಯುವತಿ, ಗಣೇಶ್ ವಿರುದ್ಧ ಇಂದು ಉಡುಪಿ ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಅದರಂತೆ ಪೊಲೀಸರು ಆತನನ್ನು ಬಂಧಿಸಿದ್ದಾರೆ.

- Advertisement -

Latest News

error: Content is protected !!