Saturday, June 13, 2026
Homeತಾಜಾ ಸುದ್ದಿನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ: ಶ್ರೀಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಭಕ್ತರು

ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿ ಮೃತದೇಹ ಪತ್ತೆ: ಶ್ರೀಗಳ ಸಾವಿನ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಭಕ್ತರು

- Advertisement -
- Advertisement -

ಹಾಸನ: ಜಿಲ್ಲೆಯ ಆಲೂರು ತಾಲೂಕಿನ ಕಾರ್ಜುವಳ್ಳಿ ಗ್ರಾಮದಲ್ಲಿ ಬಾಳೆಹೊನ್ನೂರು ಶಾಖಾಮಠದ ಶ್ರೀ ಶಂಭುಲಿಂಗ ಶಿವಾಚಾರ್ಯ ಸ್ವಾಮಿ ಅವರ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಆಲೂರು ತಾಲೂಕಿನ ವ್ಯಾಪ್ತಿಯಲ್ಲಿ ಶಂಭುಲಿಂಗ ಶಿವಾಚಾರ್ಯ ಸ್ವಾಮೀಜಿ ಹೆಚ್ಚು ಜನಪ್ರಿಯವಾಗಿದ್ದರು. ಇದೀಗ ಕಾರ್ಜುವಳ್ಳಿ ಮಠದಲ್ಲಿಯೇ ಸ್ವಾಮೀಜಿಯ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸ್ವಾಮೀಜಿ ಸಾವಿನಿಂದ ಭಕ್ತರಲ್ಲಿ ಆತಂಕ ಮನೆ ಮಾಡಿದೆ.

ಭಕ್ತರಿಗೆ ಮಾರ್ಗದರ್ಶನ ಮಾಡಬೇಕಾದ ಸ್ವಾಮೀಜಿಯವರೇ ಆತ್ಮಹತ್ಯೆಗೆ ಶರಣಾಗಿರೋದು ಭಕ್ತರಲ್ಲಿ ಹತ್ತಾರು ಪ್ರಶ್ನೆಗಳನ್ನು ಹುಟ್ಟು ಹಾಕಿದೆ. ಸ್ವಾಮೀಜಿ ಸಾವಿನ ಬಗ್ಗೆ ಭಕ್ತರಲ್ಲಿ ಅನುಮಾನ ವ್ಯಕ್ತವಾಗಿದೆ.  ಸ್ಥಳಕ್ಕೆ ಆಲೂರು ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!