Thursday, June 4, 2026
Homeಕರಾವಳಿಮಂಗಳೂರುಸುರತ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

ಸುರತ್ಕಲ್ ನಲ್ಲಿ ಭೀಕರ ರಸ್ತೆ ಅಪಘಾತ: ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸಾವು

- Advertisement -
- Advertisement -

ಮಂಗಳೂರು:  ಸುರತ್ಕಲ್ ತಡಂಬೈಲ್ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸುರತ್ಕಲ್ ಸಮೀಪದ ಕ್ರಾಸ್ ರಸ್ತೆ ಬಳಿ ಮೀನಿನ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸಾವನ್ನಪ್ಪಿದ್ದಾನೆ.

ಮೃತ ದುರ್ದೈವಿಯನ್ನು ಸೂರಿಂಜೆ ನಿವಾಸಿ ವಿನೋದ್ ಕುಮಾರ್ (43) ಎಂದು ಗುರುತಿಸಲಾಗಿದೆ. ಅಪಘಾತದ ದೃಶ್ಯ ಸಿ.ಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಬೈಕ್ ಸವಾರ ಏಕಾಏಕಿಯಾಗಿ ರಸ್ತೆಯನ್ನು ಕ್ರಾಸ್ ಮಾಡಿದಾಗ ವೇಗವಾಗಿ ಬಂದ ಲಾರಿ ನಿಯಂತ್ರಣಕ್ಕೆ ಸಿಗದೆ ಬೈಕ್ ಗೆ ಡಿಕ್ಕಿಯಾಗಿದೆ.

ಇನ್ನು ಡಿಕ್ಕಿಯಾದ ರಭಸಕ್ಕೆ ಬೈಕ್ ಹಾಗೂ ಸವಾರನನ್ನು ಲಾರಿ ಒಂದಷ್ಟು ದೂರ ಎಳೆದುಕೊಂಡು ಹೋಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನನ್ನು ಆಸ್ಪತ್ರೆಗೆ ದಾಖಲಿಸಿದ್ರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.ಉತ್ತರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!