Wednesday, June 3, 2026
Homeಕರಾವಳಿಮಂಗಳೂರು: ತಾನೇ ಹಾಕಿದ್ದ ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವು

ಮಂಗಳೂರು: ತಾನೇ ಹಾಕಿದ್ದ ಮೀನಿನ ಬಲೆಗೆ ಸಿಲುಕಿ ಮೀನುಗಾರ ಸಾವು

- Advertisement -
- Advertisement -

ಮಂಗಳೂರು: ಕಳೆದ ದಿನ ಬೈಕಂಪಾಡಿ ಬಳಿ ಸಮುದ್ರದಲ್ಲಿ ಮೀನುಗಾರನು ಮೀನು ಹಿಡಿಯಲು ಹರಡುತ್ತಿದ್ದ ಬಲೆಗೆ ಸಿಕ್ಕಿಹಾಕಿಕೊಂಡ ದುರಂತ ಘಟನೆ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ಬೈಕಂಪಾಡಿಯ ಹೊಸಹಿತ್ಲು ನಿವಾಸಿ ನವೀನ್ ಕರ್ಕೇರ(32) ಎಂದು ಗುರುತಿಸಲಾಗಿದೆ.

ಮೀನಿಗೆ ಬಲೆ ಹಾಕುವ ಸಂದರ್ಭದಲ್ಲಿ ಬಲೆಗೆ ಅವರ ಕಾಲು ಬೆರಳು ಸಿಲುಕಿದ್ದು, ಅವರು ನೀರಿಗೆ ಬಿದ್ದು ಮುಳುಗಿದ್ದಾರೆ. ಇವರು ಸಿಕ್ಕಿಹಾಕಿಕೊಂಡಿದ್ದರಿಂದ ನೀರಿನಲ್ಲಿ ಈಜಿ ದಡ ಸೇರಲು ಸಾಧ್ಯವಾಗಲಿಲ್ಲ. ಕೂಡಲೇ ಮತ್ತೊಂದು ದೋಣಿಯಲ್ಲಿದ್ದ ಮೀನುಗಾರರು ಆತನ ರಕ್ಷಣೆಗೆ ಧಾವಿಸಿದ್ದು ಕೂಡಲೇ ಅವರನ್ನು ಕರೆತಂದು ಆಸ್ಪತ್ರೆಗೆ ದಾಖಲಿಸಿದರು. ಆದರೇ ಅಷ್ಟರಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Latest News

error: Content is protected !!