- Advertisement -
![]()
- Advertisement -
ನವದೆಹಲಿ: ಹೊಸ ಕೃಷಿ ಕಾಯಿದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ಉಗ್ರ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳ ಹೋರಾಟ ತೀವ್ರ ಗೊಳ್ಳುತ್ತಿರುವ ಬೆನ್ನಲ್ಲೇ ರೈತರು ಹಾಗೂ ಸರ್ಕಾರದ ನಡುವೆ ಇಂದು ಮತ್ತೊಂದು ಸುತ್ತಿನ ಮಾತುಕತೆ ನಡೆಯುವ ಸೂಚನೆ ಸಿಕ್ಕಿದೆ.
ಕೇಂದ್ರ ಸರ್ಕಾರಕ್ಕೆ ತಮ್ಮ ಸಮಸ್ಯೆ ತಿಳಿಸುವ ರೈತರ ಪ್ರಯತ್ನ ಈಗ ಉಗ್ರ ರೂಪ ಪಡೆದಿದ್ದು ಇಂದಿನ ಮಾತುಕತೆ ಕುತೂಹಲ ಮೂಡಿಸಿದೆ.ಇಂದು ಸಿಂಘು ಗಡಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ರೈತ ಸಂಘಟನೆಗಳ ಮುಖಂಡರು ಮಾತನಾಡಿ ಹೊಸ ಕೃಷಿ ಕಾಯಿದೆಗಳ ಬಗ್ಗೆ ನಮಗೆ ಒಪ್ಪಿಗೆ ಇಲ್ಲ ಇತ್ತೀಚಿಗೆ ಜಾರಿಗೆ ತಂದ ಮೂರು ಕಾಯಿದೆಗಳನ್ನು ಸರ್ಕಾರ ಹಿಂಪಡೆಯಬೇಕು ಎಂದು ತಿಳಿಸಿದ್ದಾರೆ.ಇಂದಿನ ಮಾತುಕತೆ ವಿಫಲವಾದರೆ ನಾಡಿದ್ದು ಡಿಸೆಂಬರ್ 8ರಂದು ಭಾರತ ಬಂದ್ ಗೆ ಕರೆ ನೀಡುವುದಾಗಿ ರೈತರು ತಿಳಿಸಿದ್ದಾರೆ.
- Advertisement -


