Sunday, June 7, 2026
Homeತಾಜಾ ಸುದ್ದಿಏರುತ್ತಿದೆ ಬಂದ್ ಕಾವು- ಅಲ್ಲಲ್ಲಿ ಬಸ್ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ!..

ಏರುತ್ತಿದೆ ಬಂದ್ ಕಾವು- ಅಲ್ಲಲ್ಲಿ ಬಸ್ ಮೇಲೆ ಕಲ್ಲು ತೂರಾಟ, ಪರಿಸ್ಥಿತಿ ಉದ್ವಿಗ್ನ!..

- Advertisement -
- Advertisement -

ಬೆಂಗಳೂರು:ಇಂದು ನಡೆಯುತ್ತಿರುವ ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರುದ್ಧ ವಿವಿಧ ಕನ್ನಡಪರ ಸಂಘಟನೆಗಳ ಬಂದ್‌ ಕಾವೇರುತ್ತಿದೆ. ಪ್ರತಿಭಟನಾ ನಿರತರು ಅಲ್ಲಲ್ಲಿ ಟಯರ್‌ಗಳಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದರೆ, ಹಲವೆಡೆ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆದಿದೆ.

ಮಂಗಳೂರಿನಲ್ಲಿ ಬಂದ್’ಗೆ ಯಾವುದೇ ರೀತಿಯ ಬೆಂಬಲ ದೊರಕಿಲ್ಲ ಆದರೆ ಟೌನ್‌ಹಾಲ್‌ನಲ್ಲಿ ಪ್ರತಿಭಟನೆವೇಳೆ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಹಲವು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.ಹೊಸೂರು ರಸ್ತೆಯ ಹಳೇ ಚಂದಾಪುರ ಬಳಿ ಬಿಎಂಟಿಸಿ ಬಸ್ ಮೇಲೂ ಕಲ್ಲು ತೂರಾಟ ನಡೆದಿದೆ.ತಮಿಳುನಾಡು ಗಡಿ ಆನೇಕಲ್ ನಲ್ಲಿ ಕರ್ನಾಟಕ ಬಂದ್’ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಕನ್ನಡ ಪರ ಸಂಘಟನೆಗಳು ಪ್ರತಿಭಟನೆ ಆರಂಭಿಸಿವೆ.

- Advertisement -

Latest News

error: Content is protected !!