Saturday, August 29, 2026
Homeತಾಜಾ ಸುದ್ದಿಭಾರತ್ ಬಂದ್‍ಗೆ ದೇಶಾದ್ಯಂತ ವ್ಯಾಪಕ ಬೆಂಬಲ-ಕರಾವಳಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ!..

ಭಾರತ್ ಬಂದ್‍ಗೆ ದೇಶಾದ್ಯಂತ ವ್ಯಾಪಕ ಬೆಂಬಲ-ಕರಾವಳಿ ಜಿಲ್ಲೆಗಳಲ್ಲಿ ನೀರಸ ಪ್ರತಿಕ್ರಿಯೆ!..

- Advertisement -
- Advertisement -

ನವದೆಹಲಿ: ಇಂದು ಕೇಂದ್ರ ಸರ್ಕಾರದ ಕೃಷಿ ಮಸೂದೆ ವಿರೋಧಿಸಿ ರೈತರು ನೀಡಿರುವ ಭಾರತ್ ಬಂದ್‍ಗೆ ದೇಶಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಈಗಾಗಲೇ ಬಂದ್ ಆರಂಭವಾಗಿದ್ದು ಸಾರ್ವಜನಿಕ ಸೇವೆಗಳು ಲಭ್ಯವಾಗುತ್ತಿಲ್ಲ.

ರಾಷ್ಟ್ರೀಯ ಜನತಾ ದಳ, ತೃಣಮೂಲ ಕಾಂಗ್ರೆಸ್​, ಡಿಎಂಕೆ, ಸಮಾಜವಾದಿ ಪಕ್ಷ, ಜಾರ್ಖಂಡ್​ ಮುಕ್ತಿ ಮೋರ್ಚಾ,ರೈತರ ಹೋರಾಟಕ್ಕೆ ಕಾಂಗ್ರೆಸ್, ಜೆಡಿಎಸ್, ಎನ್​ಸಿಪಿ, ಶಿವಸೇನೆ, ಆಮ್​ ಆದ್ಮಿ ಪಕ್ಷ, ತೆಲಂಗಾಣ ರಾಷ್ಟ್ರ ಸಮಿತಿ (ಟಿಆರ್​ಎಸ್​),ಭಾರತೀಯ ರಾಷ್ಟ್ರೀಯ ಲೋಕ ದಳ, ಬಿಎಸ್ ಪಿ ಹಾಗೂ ಎಡ ಪಕ್ಷಗಳು ಬೆಂಬಲ ಸೂಚಿಸಿವೆ.

ರೈತ ಪರ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು ಬಂದ್ ನಲ್ಲಿ ಭಾಗಿಯಾಗಿವೆ. ಕರ್ನಾಟದ್ಲಲೂ ಭಾರತ್ ಬಂದ್ ಗೆ ಉತ್ತಮ ಬೆಂಬಲ ವ್ಯಕ್ತವಾಗಿದೆ.ಅಲ್ಲದೆ ದೆಹಲಿ, ಹರ್ಯಾಣ, ಪಂಜಾಬ್, ತಮಿಳುನಾಡು ರಾಜ್ಯಗಳಲ್ಲಿ ಪ್ರತಿಭಟನೆ ಕಾವು ಹೆಚ್ಚಾಗುವ ಸಾಧ್ಯತೆಯಿದೆ. ಹಲವೆಡೆ ಈಗಾಗಲೇ ಪ್ರತಿಭಟನೆಗಳು ನಡೆಯುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.ಸರ್ಕಾರಿ, ಖಾಸಗಿ ಬಸ್ ಸಂಚಾರ ಎಂದಿನಂತಿದೆ. ಕರಾವಳಿ ಜಿಲ್ಲೆಗಳಲ್ಲಿ ಬಂದ್ ಇಲ್ಲದೆ ಅಂಗಡಿ ಮುಂಗಟ್ಟುಗಳು, ಹೋಟೆಲ್ ಗಳು ತೆರೆದಿದೆ.

- Advertisement -

Latest News

error: Content is protected !!