Wednesday, June 3, 2026
Homeತಾಜಾ ಸುದ್ದಿಐಷಾರಾಮಿ ಹೋಟೆಲ್‌ನಲ್ಲಿ ನೇಣಿಗೆ ಶರಣಾದ ಜನಪ್ರಿಯ ಸೀರಿಯಲ್ ನಟಿ ವಿಜೆ ಚಿತ್ರಾ

ಐಷಾರಾಮಿ ಹೋಟೆಲ್‌ನಲ್ಲಿ ನೇಣಿಗೆ ಶರಣಾದ ಜನಪ್ರಿಯ ಸೀರಿಯಲ್ ನಟಿ ವಿಜೆ ಚಿತ್ರಾ

- Advertisement -
- Advertisement -

ಚೆನ್ನೈ: ತಮಿಳಿನ ಅನೇಕ ಧಾರಾವಾಹಿ ಮತ್ತು ಕಿರುತೆರೆ ಕಾರ್ಯಕ್ರಮಗಳ ಮೂಲಕ ಫೇಮಸ್‌ ಆಗಿದ್ದ ನಟಿ ವಿ.ಜೆ. ಚಿತ್ರಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಚಾರ ಇಡೀ ಚಿತ್ರರಂಗಕ್ಕೆ ಆಘಾತ ತಂದಿದೆ. ಅವರಿಗೆ ಕೇವಲ 28 ವರ್ಷ ವಯಸ್ಸಾಗಿತ್ತು. ನಜರೆತ್ ಪೆಟ್ಟೈನ ಪಂಚತಾರಾ ಹೋಟೆಲಿನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಅವರ ಮೃತದೇಹ ಪತ್ತೆ ಆಗಿರುವ ಬಗ್ಗೆ ವರದಿ ಆಗಿದೆ.

ಜನಪ್ರಿಯ ತಮಿಳು ಕಾರ್ಯಕ್ರಮ ಪಾಂಡಿಯನ್ ಸ್ಟೋರ್ಸ್ ನಲ್ಲಿ ಮುಲ್ಲೈ ಪಾತ್ರದಲ್ಲಿ ನಟಿಸಿ ಮನೆಮಾತಾಗಿದ್ದ ಚಿತ್ರಾ ಅವರಿಗೆ ಕೆಲವೇ ದಿನಗಳ ಹಿಂದೆ ಉದ್ಯಮಿ ಹೇಮಂತ್‌ ಜೊತೆ ನಿಶ್ಚಿತಾರ್ಥವಾಗಿತ್ತು. ಆ ಬಳಿಕ ಇಬ್ಬರೂ ಜೊತೆಯಾಗಿಯೇ ಇರುತ್ತಿದ್ದರು ಎನ್ನಲಾಗಿದೆ. ಇವಿಪಿ ಫಿಲ್ಮ್ ಸಿಟಿಯಲ್ಲಿ ಶೂಟಿಂಗ್ ಮುಗಿಸಿ ಇಂದು ಮುಂಜಾನೆ 2.30ರ ಸುಮಾರಿಗೆ ಹೋಟೆಲ್ ಗೆ ಮರಳಿದ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಖಿನ್ನತೆಯಿಂದ ಬಳಲುತ್ತಿದ್ದರು ಎಂಬ ಮಾತು ಕೂಡ ಕೇಳಿಬಂದಿದೆ.

ಚಿತ್ರಾ ಆತ್ಮಹತ್ಯೆಯ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಕಾರಣ ಏನು ಎಂಬುದು ಇನ್ನಷ್ಟೇ ಗೊತ್ತಾಗಬೇಕಿದೆ. ಈ ಬಗ್ಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

- Advertisement -

Latest News

error: Content is protected !!