- Advertisement -
- Advertisement -
ಮಂಡ್ಯ: ರಾಜ್ಯದಲ್ಲಿ ಈಗಾಗಲೇ ಗ್ರಾಮ ಪಂಚಾಯಿತಿ ಚುನಾವಣೆ ಘೋಷಣೆಯಾಗಿದೆ. ಲೋಕಲ್ ವಾರ್ ನಲ್ಲಿ ಗೆಲುವು ಸಾಧಿಸೋದಕ್ಕಾಗಿ ಎಲ್ಲಾ ಪಕ್ಷಗಳು ಕೂಡ ಭರ್ಜರಿ ತಯಾರಿ ನಡೆಸುತ್ತಿವೆ.
ಹೀಗಿರುವಾಗಲೇ ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಲಾಳನಕೆರೆಯಲ್ಲಿ ಕುರಿ-ಕೋಳಿಗಳ ರೀತಿ ಗ್ರಾಮ ಪಂಚಾಯ್ತಿ ಸದಸ್ಯ ಸ್ಥಾನವನ್ನು ಹರಾಜು ಹಾಕುತ್ತಿರುವುದು ಇದೀಗ ಬೆಳಕಿಗೆ ಬಂದಿದೆ. ಲಕ್ಷಾಂತರ ರೂಪಾಯಿಗಳಿಗೆ ಗ್ರಾಮ ಪಂಚಾಯ್ತಿ ಸ್ಥಾನವನ್ನು ಲಾಳನಕೆರೆ ಗ್ರಾಮಸ್ಥರು ಮನೆಯೊಂದರಲ್ಲಿ ಬಿಡ್ ಮೂಲಕ ಹರಾಜು ಹಾಕಿದ್ದಾರೆ.
ಇದೀಗ ಈ ವಿಡಿಯೋ ಎಲ್ಲೆಡೆ ವೈರಲ್ ಆಗಿದೆ. ಇದನ್ನು ನೋಡಿದ ಪ್ರಜ್ಞಾವಂತ ಮತದಾರರು ಎಲ್ಲಿಗೆ ಬಂತಪ್ಪ ಕಾಲ ಎಂದು ಮಾತನಾಡಿಕೊಳ್ಳುತ್ತಿದ್ದಾರೆ.
- Advertisement -