Sunday, June 7, 2026
Homeಕರಾವಳಿಉಡುಪಿಉಡುಪಿಯಲ್ಲಿ ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

ಉಡುಪಿಯಲ್ಲಿ ಲ್ಯಾಪ್ ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದು ಯುವಕ ಸಾವು

- Advertisement -
- Advertisement -

ಉಡುಪಿ: ಸಿಡಿಲು‌ ಬಡಿದು‌ ಯುವಕನೋರ್ವ ಸಾವನ್ನಪ್ಪಿದ ಘಟನೆ ವಂಡಾರಿನ ಬೋರ್ಡಕಲ್ಲಿನಲ್ಲಿ ನಿನ್ನೆ ರಾತ್ರಿ ನಡೆದಿದೆ. ಸ್ಥಳೀಯ ನಿವಾಸಿ‌ ಸಾಫ್ಟ್ ವೇರ್ ಇಂಜಿನಿಯರ್ ಚೇತನ್ (24) ಮೃತಪಟ್ಟ ಯುವಕ.

ಚೇತನ್ ಮನೆಯೊಳಗಡೆ ಲ್ಯಾಪ್‌ಟಾಪ್ ನಲ್ಲಿ ಕೆಲಸ ಮಾಡುತ್ತಿದ್ದಾಗ ಸಿಡಿಲು ಬಡಿದಿದೆ.  ಸಿಡಿಲಿನ ಹೊಡೆತಕ್ಕೆ ಚೇತನ್ ತೀವ್ರವಾಗಿ ಅಸ್ವಸ್ಥಗೊಂಡಿದ್ದಾರೆ. ತಕ್ಷಣ ಅವರನ್ನು ಬ್ರಹ್ಮಾವರದ ಖಾಸಗಿ ಆಸ್ಪತ್ರೆ ಗೆ ಕರೆದೊಯ್ಯಲಾಗಿದೆ ಆದರೆ ಪರೀಕ್ಷಿಸಿದ ವೈದ್ಯರು ಚೇತನ್ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.

ಈತ ಚೇತನ್ ಬೆಂಗಳೂರಿನ ಪ್ರತಿಷ್ಠಿತ ಸಾಫ್ಟ್ ವೇರ್ ಕಂಪನಿಯ ಉದ್ಯೋಗಿಯಾಗಿದ್ದಾರೆ. ಲಾಕ್ ಡೌನ್ ಬಳಿಕ ವರ್ಕ್ ಫ್ರಮ್ ಹೋಮ್ ಮಾಡುತ್ತಿದ್ದರು.  ಇರದ್ದು ತೀರಾ ಬಡತನದ ಕುಟುಂಬವಾಗಿದ್ದು ಸಾಕಷ್ಟು ಕಷ್ಟಪಟ್ಟು ಇಂಜಿನಿಯರಿಂಗ್ ಪದವಿ ಮುಗಿಸಿದ್ದರು. ಅಲ್ಲದೇ ಮನೆಗೆ ಆಧಾರವಾಗಿದ್ದರು.  ಮೃತ ಚೇತನ್, ತಂದೆ,ತಾಯಿ, ಸಹೋದರಿಯನ್ನು ಕಳೆದು ಅಗಲಿದ್ದಾರೆ.

- Advertisement -

Latest News

error: Content is protected !!