Thursday, June 4, 2026
Homeತಾಜಾ ಸುದ್ದಿಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೊನಾ ಪಾಸಿಟಿವ್

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾಗೆ ಕೊರೊನಾ ಪಾಸಿಟಿವ್

- Advertisement -
- Advertisement -

ನವದೆಹಲಿ: ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿರುವ ಜಗತ್ ಪ್ರಕಾಶ್ ನಡ್ಡಾಗೆ(ಜೆ.ಪಿ ನಡ್ಡಾ) ಕೋವಿಡ್ ಸೋಂಕು ದೃಢವಾಗಿದ್ದು, ಈ ಬಗ್ಗೆ ಸ್ವತಃ ನಡ್ಡಾ ಅವರೇ ಟ್ವೀಟರ್ ನಲ್ಲಿ ಸೋಂಕು ದೃಢವಾಗಿರುವ ಕುರಿತು ಸ್ಪಷ್ಟಪಡಿಸಿದ್ದಾರೆ.

ಕೊರೊನಾ ಸೋಂಕಿನ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಭಾನುವಾರ ಪರೀಕ್ಷೆಗೆ ಒಳಗಾಗಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಸೋಂಕಿನ ಪ್ರಾರಂಭಿಕ ಲಕ್ಷಣಗಳು ಕಾಣಿಸಿದಾಗ ಕೋವಿಡ್ ಪರೀಕ್ಷೆ ಮಾಡಿದ್ದು, ಬಳಿಕ ಸೋಂಕು ದೃಢವಾಗಿದೆ ಎಂದು ಟ್ವೀಟ್ ಮಾಡಿದ್ದಾರೆ.

ಸದ್ಯ ನಡ್ಡಾ ಹೋಮ್ ಐಸೋಲೇಷನ್ ನಲ್ಲಿದ್ದಾರೆ. ತನ್ನೊಂದಿಗೆ ಕಳೆದ ಕೆಲ ದಿನಗಳಿಂದ ಸಂಪರ್ಕದಲ್ಲಿದ್ದವರು ಪರೀಕ್ಷೆ ಮಾಡಿಸಿಕೊಳ್ಳಿ ಎಂದು ವಿನಂತಿ ಮಾಡಿದ್ದಾರೆ.

ಇತ್ತೀಚೆಗಷ್ಟೇ ಕೋಲ್ಕತಾದಲ್ಲಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಜೆಪಿ ನಡ್ಡಾ ಮೇಲೆ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಈ ವಿಷಯದಲ್ಲಿ ಇದೀಗ ಕೇಂದ್ರ ಮತ್ತು ಪಶ್ಚಿಮ ಬಂಗಾಳ ಸರಕಾರದ ನಡುವೆ ಹೋರಾಟ ನಡೆದಿದೆ.

- Advertisement -

Latest News

error: Content is protected !!