Thursday, September 10, 2026
Homeಕರಾವಳಿಕಡಬದಲ್ಲಿ ವಿದ್ಯಾರ್ಥಿನಿಯನ್ನು ಬಲಿ ಪಡೆದ ಜಾಂಡೀಸ್

ಕಡಬದಲ್ಲಿ ವಿದ್ಯಾರ್ಥಿನಿಯನ್ನು ಬಲಿ ಪಡೆದ ಜಾಂಡೀಸ್

- Advertisement -
- Advertisement -

ಕಡಬ:ಜಾಂಡೀಸ್ ನಿಂದ ಬಳಲುತ್ತಿದ್ದ ಕಾಲೇಜು ವಿದ್ಯಾರ್ಥಿನಿಯೋರ್ವಳು ಮೃತ ಪಟ್ಟ ಘಟನೆ ಕಡಬದಲ್ಲಿ ನಡೆದಿದೆ.

ಕಡಬ ತಾಲೂಕು ಕೋಡಿಂಬಾಳ ಗ್ರಾಮದ ಹಮೀದ್ ನ್ಯಾಶನಲ್ ಎಂಬವರ ಪುತ್ರಿ ಫಾತಿಮತ್ ತಬ್ಶೀರಾ (18) ಮೃತ ವಿದ್ಯಾರ್ಥಿನಿ. ಈಕೆಗೆ ನಾಲ್ಕು ದಿನಗಳ ಹಿಂದೆ ಜಾಂಡೀಸ್ ಕಾಣಿಸಿಕೊಂಡಿತ್ತು. ಇದಕ್ಕೆ  ಚಿಕಿತ್ಸೆ ಕೂಡ ಪಡೆದಿದ್ದರು.

ಆದ್ರೆ ನಿನ್ನೆ ರಾತ್ರಿ ಆಕೆಯ ಆರೋಗ್ಯದಲ್ಲಿ ತೀವ್ರ ಏರು ಪೇರುಗೊಂಡಿತ್ತು. ಈ ಹಿನ್ನೆಲೆಯಲ್ಲಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

- Advertisement -

Latest News

error: Content is protected !!