Friday, June 5, 2026
Homeತಾಜಾ ಸುದ್ದಿರಸ್ತೆಯಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿದ್ದ ಸಿಮೆಂಟ್ ಕಂಬ; ನೋಡುಗರನ್ನು ಬೆಚ್ಚಿ ಬೀಳಿಸುತ್ತೆ ವಿಡಿಯೋ

ರಸ್ತೆಯಲ್ಲಿ ಹೋಗುತ್ತಿದ್ದಾಗ ತಲೆ ಮೇಲೆ ಬಿದ್ದ ಸಿಮೆಂಟ್ ಕಂಬ; ನೋಡುಗರನ್ನು ಬೆಚ್ಚಿ ಬೀಳಿಸುತ್ತೆ ವಿಡಿಯೋ

- Advertisement -
- Advertisement -

ರಾಜಸ್ಥಾನ ; ನಗರದ ಮಾರುಕಟ್ಟೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಯುವಕರ ಮೇಲೆ ನಿರ್ಮಾಣ ಹಂತದ ಕಟ್ಟಡದ ಸಿಮೆಂಟ್ ಕಂಬವೊಂದು ಕುಸಿದು ಬಿದ್ದ ಪರಿಣಾಮ ಓರ್ವ ಗಂಭೀರ ಗಾಯಗೊಂಡ ಘಟನೆ ಭರತ್‌ಪುರದ ಸರಫಾ ಮಾರುಕಟ್ಟೆಯಲ್ಲಿ ನಡೆದಿದೆ.

ಇಬ್ಬರು ಯುವಕರು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಟ್ಟಡದ ಮೂರನೇ ಮಹಡಿಯಿಂದ ಸಿಮೆಂಟ್ ಕಂಬವೊಂದು ಕುಸಿದು ರಸ್ತೆಯಲ್ಲಿ ನೆಡೆದುಕೊಂಡು ಹೋಗುತ್ತಿದ್ದ ಓರ್ವ ಯುವಕನ ತಲೆಯ ಮೇಲೆ ಬಿದ್ದಿದೆ. ಪರಿಣಾಮ ಓರ್ವ ಗಂಭೀರ ಗಾಯಗೊಂಡು ಇನ್ನೋರ್ವ ಅದೃಷ್ಟವಶಾತ್ ಯಾವುದೇ ಗಾಯಗಳಾಗದೆ ಪಾರಾಗಿದ್ದಾನೆ.


ಗಂಭೀರ ಗಾಯಗೊಂಡ ಯುವಕನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.ಸರಫಾ ಮಾರುಕಟ್ಟೆ ಸದಾ ಜನಜಂಗುಳಿಯಿಂದ ಕೊಡಿರುವ ರಸ್ತೆಯಾಗಿದ್ದು ಕಂಬ ಕುಸಿದು ಬೀಳುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಬೆಚ್ಚಿ ಬೀಳಿಸುವಂತಿದೆ.

- Advertisement -

Latest News

error: Content is protected !!