Friday, June 5, 2026
Homeಕರಾವಳಿಎಐಸಿಸಿ ಕಾರ್ಯದರ್ಶಿಯಾಗಿ ಐವನ್ ಡಿಸೋಜ ನೇಮಕ

ಎಐಸಿಸಿ ಕಾರ್ಯದರ್ಶಿಯಾಗಿ ಐವನ್ ಡಿಸೋಜ ನೇಮಕ

- Advertisement -
- Advertisement -

ಮಂಗಳೂರು: ರಾಜ್ಯ ಸರಕಾರದ ಮಾಜಿ ಮುಖ್ಯ ಸಚೇತಕ, ವಿಧಾನ ಪರಿಷತ್ ಮಾಜಿ ಶಾಸಕ ಐವನ್ ಡಿಸೋಜ ಅವರನ್ನು ಎಐಸಿಸಿ ಕಾರ್ಯದರ್ಶಿಯಾಗಿ ಅಖಿಲ ಭಾರತ ಕಾಂಗ್ರೆಸ್ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ನೇಮಕಗೊಳಿಸಿದ್ದಾರೆ.

ಅಲ್ಲದೆ ಐಸಿಸಿ ಕಾರ್ಯದರ್ಶಿಯಾಗಿ ನೇಮಕಗೊಂಡು ಕೇರಳ ರಾಜ್ಯದ ಉಸ್ತುವಾರಿಯನ್ನು ವಹಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ(ಆಡಳಿತ) ಕೆ.ಸಿ.ವೇಣುಗೋಪಾಲ್ ಆದೇಶಿಸಿದ್ದಾರೆ. ಈ ಹಿಂದೆ ಕೇರಳ ರಾಜ್ಯದ ಇಡ್ಕಿ ಮತ್ತು ಕೊಟ್ಟಾಯಂ ಜಿಲ್ಲೆಗಳ ಚುನಾವಣಾ ವೀಕ್ಷಕರಾಗಿ ಕಾರ್ಯ ನಿರ್ವಹಿಸಿದ್ದರು.

ಐವನ್ ಡಿಸೋಜ ಅವರು 1994 ಮತ್ತು 1999ರಲ್ಲಿ ಕಾಪು ವಿಧಾನ ಸಭಾ ಕ್ಷೇತ್ರದಿಂದ ಹಾಗೂ 2008ರಲ್ಲಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಅಲ್ಲದೆ ಮುಖ್ಯಮಂತ್ರಿಯ ಸಂಸದೀಯ ಕಾರ್ಯದರ್ಶಿಯಾಗಿ ಕಂದಾಯ ಇಲಾಖೆಯ ಜವಾಬ್ದಾರಿ ವಹಿಸಿ, ವಿಧಾನ ಪರಿಷತಿನಲ್ಲಿ ಶೇ.100 ಹಾಜರಾತಿ ಪಡೆದು ಸದನವೀರ ಪ್ರಶಸ್ತಿಗೆ ಪಾತ್ರರಾಗಿದ್ದರು.

- Advertisement -

Latest News

error: Content is protected !!