Saturday, June 6, 2026
Homeತಾಜಾ ಸುದ್ದಿರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲ, 6 ತಿಂಗಳು ಮಾಸ್ಕ್‌ ಕಡ್ಡಾಯ: ಸಿಎಂ

ರಾಜ್ಯದಲ್ಲಿ ಲಾಕ್‌ಡೌನ್‌ ಇಲ್ಲ, 6 ತಿಂಗಳು ಮಾಸ್ಕ್‌ ಕಡ್ಡಾಯ: ಸಿಎಂ

- Advertisement -
- Advertisement -

ಮುಂಬೈ: ಮಹಾರಾಷ್ಟ್ರದಲ್ಲಿ ಮುಂಬರುವ ಆರು ತಿಂಗಳ ತನಕ ಮಾಸ್ಕ್‌ ಧರಿಸುವುದು ಕಡ್ಡಾಯ ಎಂದು ಮುಖ್ಯಮಂತ್ರಿ ಉದ್ಧವ್‌ ಠಾಕ್ರೆ ಅವರು ಹೇಳಿದರು.

ಸಾಮಾಜಿಕ ಜಾಲತಾಣದ ಮೂಲಕ ರಾಜ್ಯದ ಜನರನ್ನುದ್ಧೇಶಿಸಿ ಮಾತನಾಡಿದ ಅವರು, ‘ಮಹಾರಾಷ್ಟ್ರದಲ್ಲಿ ಮತ್ತೊಂದು ಲಾಕ್‌ಡೌನ್‌ ಮತ್ತು ರಾತ್ರಿ ಕರ್ಫ್ಯೂ ಹೇರುವಂತೆ ತಜ್ಞರು ಸಲಹೆ ನೀಡಿದ್ದಾರೆ. ಆದರೆ ನನಗೆ ಆ ರೀತಿಯ ಕ್ರಮಕೈಗೊಳ್ಳಲು ಇಷ್ಟವಿಲ್ಲ’ ಎಂದು ಹೇಳಿದರು.

‘ರಾಜ್ಯದಲ್ಲಿ ಕೊರೊನಾ ವೈರಸ್‌ ಪರಿಸ್ಥಿತಿಯು ಸ್ವಲ್ಪಮಟ್ಟಿಗೆ ನಿಯಂತ್ರಣದಲ್ಲಿದೆ. ರೋಗ ನಿವಾರಣೆ ಮಾಡುವುದಕ್ಕಿಂತ ರೋಗ ಬರದಂತೆ ಮುಂಜಾಗೂರಕತೆ ವಹಿಸುವುದು ಉತ್ತಮ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್‌ ಧರಿಸಬೇಕು. ಇದನ್ನು ಮುಂದಿನ ಆರು ತಿಂಗಳಿನವರೆಗೆ ರೂಢಿ ಮಾಡಿಕೊಳ್ಳಬೇಕು’ ಎಂದು ಅವರು ತಿಳಿಸಿದರು.

- Advertisement -

Latest News

error: Content is protected !!