Thursday, June 4, 2026
Homeಕರಾವಳಿಸೌತಡ್ಕ: ಮನೆ ದರೋಡೆ ನಡೆಸಿದ ಒಂಭತ್ತು ಮಂದಿ ದರೋಡೆಕೋರರ ತಂಡ- ಮಾಲಕಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು!…

ಸೌತಡ್ಕ: ಮನೆ ದರೋಡೆ ನಡೆಸಿದ ಒಂಭತ್ತು ಮಂದಿ ದರೋಡೆಕೋರರ ತಂಡ- ಮಾಲಕಿಗೆ ಚಾಕುವಿನಿಂದ ಇರಿದ ದುಷ್ಕರ್ಮಿಗಳು!…

- Advertisement -
- Advertisement -

ಬೆಳ್ತಂಗಡಿ:ಇಲ್ಲಿನ ಕೊಕ್ಕಡ ಗ್ರಾಮದ ಸೌತಡ್ಕ ದೇವಸ್ಥಾನಕ್ಕೆ ತೆರಳುವ ರಸ್ತೆಯಲ್ಲಿ ಇಂದು ನಸುಕಿನವೇಳೆ ಸುಮಾರು ಒಂಭತ್ತು ಮಂದಿ ದರೋಡೆಕೋರರ ತಂಡ ತುಕ್ರಪ್ಪ ಶೆಟ್ಟಿ ಎಂಬವರ ಮನೆಗೆ ನುಗ್ಗಿದೆ.ಮನೆಯವರನ್ನು ಕುಡಿ ಹಾಕಿ ಮನೆಯ ಯಜಮಾನ ಮತ್ತು ಅವರ‌ ಪತ್ನಿಯ ಮೇಲೆ ಹಲ್ಲೆ ನಡೆಸಿದ್ದಾರೆ. ಲಕ್ಷಾಂತರ ಮೌಲ್ಯದ ನಗ, ನಗದು ದೋಚಿದ ಘಟನೆ ವರದಿಯಾಗಿದೆ.

ಘಟನೆ ವೇಳೆ ಮನೆಯಲ್ಲಿ ಪತಿ, ಪತ್ನಿ ಮತ್ತು ಇಬ್ಬರು ಸಣ್ಣ ಮಕ್ಕಳು ಮಾತ್ರ ಇದ್ದರು. ತುಕ್ರಪ್ಪ ಶೆಟ್ಟಿ ಯವರ ಪತ್ನಿ ಅಡ್ಡಬಂದಿದ್ದು ಆಕೆಗೆ ಕತ್ತಿಯಿಂದ ಇರಿದಿದ್ದು ತೀವ್ರ ಗಾಯಗಳಾಗಿ ಚಿಕಿತ್ಸೆಗಾಗಿ ಮಂಗಳೂರಿನ ಅಸ್ಪತ್ರೆಗೆ ದಾಖಲಾಗಿದ್ದಾರೆ.ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ತನಿಖೆ ಮುಂದುವರಿದಿದೆ.

- Advertisement -

Latest News

error: Content is protected !!