Saturday, June 6, 2026
Homeಕರಾವಳಿಕಡಬದಲ್ಲಿ ಶಾಲೆಗೆಂದು ತೆರಳಿದ ಹೈಸ್ಕೂಲ್ ವಿದ್ಯಾರ್ಥಿನಿ ನಾಪತ್ತೆ

ಕಡಬದಲ್ಲಿ ಶಾಲೆಗೆಂದು ತೆರಳಿದ ಹೈಸ್ಕೂಲ್ ವಿದ್ಯಾರ್ಥಿನಿ ನಾಪತ್ತೆ

- Advertisement -
- Advertisement -

ಕಡಬ: ಶಾಲೆಗೆಂದು ತೆರಳಿದ ಹೈಸ್ಕೂಲ್ ವಿದ್ಯಾರ್ಥಿನಿ ನಾಪತ್ತೆಯಾಗಿರುವ ಘಟನೆ ಕಡಬ ತಾಲೂಕಿನ ಮರ್ದಾಳದಲ್ಲಿ ನಡೆದಿದೆ.

ಐತ್ತೂರು ಗ್ರಾಮದ ಬೆತ್ತೋಡಿ ಸಿ.ಆರ್.ಸಿ ಕಾಲನಿಯ ನಿವಾಸಿ ಜಗದೀಶ ಎಂಬವರ ಪುತ್ರಿ ನರ್ಮದಾ ಬಿ.ಜೆ (16) ನಾಪತ್ತೆಯಾದ ಬಾಲಕಿ. ಮರ್ದಾಳದ ಹೈಸ್ಕೂಲ್ ವಿದ್ಯಾರ್ಥಿನಿಯಾಗಿರುವ ಈಕೆ ಬುಧವಾರ ಶಾಲೆಗೆಂದು ತೆರಳಿದ್ದು, ಮನೆಗೆ ಬಾರದ ಹಿನ್ನೆಲೆಯಲ್ಲಿ ಅಧ್ಯಾಪಕರಲ್ಲಿ ವಿಚಾರಿಸಿದಾಗ ಶಾಲೆಗೆ ರಜೆ ಇರುವುದಾಗಿ ತಿಳಿಸಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಕಡಬ ಠಾಣೆಗೆ ದೂರು ನೀಡಿರುವ ಬಾಲಕಿ ತಂದೆ ಜಗದೀಶ್ ನಾಪತ್ತೆಯಾಗಿರುವ ಮಗಳನ್ನು ಪತ್ತೆ ಹಚ್ಚಿಕೊಡುವಂತೆ ವಿನಂತಿಸಿಕೊಂಡಿದ್ದಾರೆ. ಬಿಳಿಬಣ್ಣದ ಚೂಡಿದಾರ ಧರಿಸಿರುವ ಈಕೆ ಕನ್ನಡ, ತುಳು, ತಮಿಳು ಭಾಷೆ ಮಾತನಾಡುತ್ತಾಳೆ. ಈಕೆಯ ಬಗ್ಗೆ ಸುಳಿವು ಲಭ್ಯವಾದರೆ ಕಡಬ ಪೊಲೀಸ್ ಠಾಣೆ 08251-260044 ಅಥವಾ ಪೊಲೀಸ್ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.

- Advertisement -

Latest News

error: Content is protected !!