Thursday, June 4, 2026
Homeತಾಜಾ ಸುದ್ದಿನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ

ನಟ ರಮೇಶ್​ ಅರವಿಂದ್ ಮನೆಯಲ್ಲಿ ಮಗಳ ಮದುವೆ ಸಂಭ್ರಮ

- Advertisement -
- Advertisement -

ಬೆಂಗಳೂರು: ಖ್ಯಾತ ನಟ ರಮೇಶ್​ ಅರವಿಂದ್ ಹಾಗೂ ಅರ್ಚನಾ ದಂಪತಿಯ ಪುತ್ರಿ ನಿಹಾರಿಕಾ ಅವರ ಮದುವೆ ಅಕ್ಷಯ್ ಅವರೊಂದಿಗೆ ಡಿ.28ರಂದು ನಡೆಯಲಿದೆ.

ನಿಹಾರಿಕಾ ಮತ್ತು ಅಕ್ಷಯ್ ಒಂದೇ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ. ಕೋವಿಡ್-19 ನಿಯಮಾನುಸಾರ ಎರಡೂ ಕುಟುಂಬಗಳ ಸದಸ್ಯರ ಸಮ್ಮುಖದಲ್ಲಿ ಮದುವೆ ನಡೆಯಲಿದೆ.

ನಿಹಾರಿಕಾ ಹಾಗೂ ಅಕ್ಷಯ್ ಮದುವೆಗೆ ಕೆಲವು ಗಣ್ಯರು, ಸಂಬಂಧಿಕರಿಗಷ್ಟೇ ಆಹ್ವಾನ ನೀಡಲಾಗಿದೆ ಎನ್ನಲಾಗಿದ್ದು, ಕೋವಿಡ್ ನಿಯಮದ ಪ್ರಕಾರ ಕಾರ್ಯಕ್ರಮ ನಡೆಯಲಿದೆ. ಜನವರಿ 2ನೇ ವಾರದಲ್ಲಿ ಆರತಕ್ಷತೆ ನಡೆಯಲಿದೆ. ಅಂದು ಚಿತ್ರರಂಗ ಸೇರಿದಂತೆ ವಿವಿಧ ಕ್ಷೇತ್ರಗಳ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

- Advertisement -

Latest News

error: Content is protected !!