Friday, June 5, 2026
Homeಕರಾವಳಿಪಡುಬಿದ್ರೆಯಲ್ಲಿ ಬಸ್ ಗಾಗಿ ಕಾಯುತ್ತಿದ್ದವರಿಗ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ಸಾವು

ಪಡುಬಿದ್ರೆಯಲ್ಲಿ ಬಸ್ ಗಾಗಿ ಕಾಯುತ್ತಿದ್ದವರಿಗ ಡಿಕ್ಕಿ ಹೊಡೆದ ಕಾರು: ಇಬ್ಬರು ಸ್ಥಳದಲ್ಲೇ ಸಾವು

- Advertisement -
- Advertisement -

ಮಂಗಳೂರುಬಸ್ ಗಾಗಿ ರಸ್ತೆ ಪಕ್ಕದಲ್ಲಿ ಕಾಯುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿಯಾಗಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಪಡುಬಿದ್ರಿ ಸಮೀಪದ ಎರ್ಮಾಳಿನಲ್ಲಿ ನಡೆದಿದೆ.

ಮೃತರನ್ನು ಎರ್ಮಾಳ್ ನಿವಾಸಿ ಸಂಜೀವ ದೇವಾಡಿಗ (45) ಮತ್ತು ಉತ್ತರ ಪ್ರದೇಶ ಮೂಲದ ಅರವಿಂದ್ (22) ಎಂದು ಗುರುತಿಸಲಾಗಿದೆ.

ಉಡುಪಿ ಕಡೆಯಿಂದ ಮಂಗಳೂರಿನತ್ತ ಚಲಿಸುತ್ತಿದ್ದ ಮಾರುತಿ ಅಲ್ಟೋ ಕಾರು ರಾಷ್ಟ್ರೀಯ ಹೆದ್ದಾರಿ 66ರ ತೆಂಕ ಎರ್ಮಾಳ್ ಸರಕಾರಿ ಶಾಲೆ ಮುಂಭಾಗದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದ ಇಬ್ಬರಿಗೆ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಇಬ್ಬರೂ ರಸ್ತೆಗೆಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಪಡುಬಿದ್ರಿ ಪೊಲೀಸರು ಧಾವಿಸಿ ತನಿಖೆ ನಡೆಸಿದ್ದಾರೆ.

- Advertisement -

Latest News

error: Content is protected !!