Saturday, June 13, 2026
Homeತಾಜಾ ಸುದ್ದಿBIG BREAKING: ರೈಲಿಗೆ ತಲೆಕೊಟ್ಟು ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ

BIG BREAKING: ರೈಲಿಗೆ ತಲೆಕೊಟ್ಟು ಉಪಸಭಾಪತಿ ಧರ್ಮೇಗೌಡ ಆತ್ಮಹತ್ಯೆ

- Advertisement -
- Advertisement -

ಚಿಕ್ಕಮಗಳೂರು: ಉಪಸಭಾಪತಿ ಎಸ್.ಎಲ್. ಧರ್ಮೇಗೌಡ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೆಡಿಎಸ್ ಪಕ್ಷದಿಂದ ವಿಧಾನಪರಿಷತ್ ಸದಸ್ಯರಾಗಿದ್ದ ಅವರು ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಗುಣಸಾಗರದಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾತ್ರಿ 11:30 ರ ಸುಮಾರಿಗೆ ಘಟನೆ ನಡೆದಿದೆ. ರಾತ್ರಿ 10 ಗಂಟೆಗೆಮನೆಯಿಂದ ಸ್ಯಾಂಟ್ರೋ ಕಾರಿನಲ್ಲಿ ಒಬ್ಬರೇ ತೆರಳಿದ್ದರು. ರಾತ್ರಿಯಾದರೂ ವಾಪಸ್ ಬಾರದ ಕಾರಣ ಗನ್ ಮ್ಯಾನ್, ಪೊಲೀಸರು, ಸ್ಥಳೀಯರು ಹುಡುಕಾಟ ನಡೆಸಿದ್ದರು.

ಕಡೂರು ತಾಲ್ಲೂಕಿನ ಗುಣಸಾಗರ ರೈಲು ಹಳಿಯ ಮೇಲೆ ಮಂಗಳವಾರ ಬೆಳಗ್ಗಿನ ಜಾವ ಮೃತದೇಹ ಪತ್ತೆಯಾಗಿದ್ದು ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ದೇವೇಗೌಡರ ಕುಟುಂಬಕ್ಕೆ ಧರ್ಮೇಗೌಡರು ಆಪ್ತರಾಗಿದ್ದರು.

- Advertisement -

Latest News

error: Content is protected !!