Saturday, June 13, 2026
Homeತಾಜಾ ಸುದ್ದಿಖ್ಯಾತ ಕಾರು ವಿನ್ಯಾಸಕ ದಿಲೀಪ್ ಛಾಬ್ರಿಯಾರ್ ಬಂಧನ- ವಂಚನೆ ಹಾಗೂ ಫೋರ್ಜರಿ ಪ್ರಕರಣ ದಾಖಲು!..

ಖ್ಯಾತ ಕಾರು ವಿನ್ಯಾಸಕ ದಿಲೀಪ್ ಛಾಬ್ರಿಯಾರ್ ಬಂಧನ- ವಂಚನೆ ಹಾಗೂ ಫೋರ್ಜರಿ ಪ್ರಕರಣ ದಾಖಲು!..

- Advertisement -
- Advertisement -

ಮುಂಬೈ:ವಂಚನೆ ಹಾಗೂ ಫೋರ್ಜರಿ ಪ್ರಕರಣದಲ್ಲಿ ಮುಂಬೈನ ಕ್ರೈಂ ಗುಪ್ತಚರ ಘಟಕ ಖ್ಯಾತ ಕಾರು ವಿನ್ಯಾಸಕ ದಿಲೀಪ್ ಛಾಬ್ರಿಯಾರನ್ನು ಬಂಧಿಸಿದೆ.ಮುಂಬೈನ ಕ್ರೈಂ ಬ್ರ್ಯಾಂಚ್ ಪೊಲೀಸರು ಈ ಕುರಿತು ಮಾಹಿತಿ ನೀಡಿದೆ.ಇವರ ಒಡೆತನದ ಡಿಸಿ ಡಿಸೈನ್ಸ್ ಸಂಸ್ಥೆಗೆ ಬೀಗ ಹಾಕಲಾಗಿದೆ. ಅಲ್ಲದೆ ಇವರ ಸುಮಾರು 75 ಲಕ್ಷ ಮೌಲ್ಯದ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಲಾಗಿದೆ.

ಕಾರು ನೋಂದಣಿ ಅಕ್ರಮ ಜಾಲದ ಬೆನ್ನು ಹತ್ತಿದ ಪೊಲೀಸರು ದಿಲೀಪ್ ಅವರನ್ನು ಬಂಧಿಸಿ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ಹಾಜರು ಪಡಿಸಿದ್ದು ತೀವ್ರ ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!