Sunday, August 30, 2026
Homeತಾಜಾ ಸುದ್ದಿ"2023ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದಿದ್ದಲ್ಲಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ"

“2023ಕ್ಕೆ ಜೆಡಿಎಸ್ ಅಧಿಕಾರಕ್ಕೆ ಬಾರದಿದ್ದಲ್ಲಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ”

- Advertisement -
- Advertisement -

ಹಾಸನ: ಇತ್ತೀಚೆಗೆ ನಡೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಉತ್ತಮ ಸಾಧನೆ ಮಾಡಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬರುವುದು ನಿಶ್ಚಿತ. ಒಂದು ವೇಳೆ 2023ರಲ್ಲಿ ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಾರದೆ ಹೋದಲ್ಲಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಹೇಳಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಕಳೆದ ಕೆಲವು ದಿನಗಳಿಂದ ಜೆಡಿಎಸ್, ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದ್ದು, ಇದಕ್ಕೆ ಕಟುವಾಗಿ ಪ್ರತಿಕ್ರಿಯಿಸಿದ್ದ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಇಂತಹ ಬೆಳವಣಿಗೆ ನಡೆದರೆ ತಾವು ರಾಜಕೀಯದಿಂದಲೇ ನಿವೃತ್ತಿಯಾಗುವುದಾಗಿ ಹೇಳಿದ್ದರು.

- Advertisement -

Latest News

error: Content is protected !!