Friday, June 5, 2026
Homeತಾಜಾ ಸುದ್ದಿಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಮತ್ತೊಬ್ಬ ಸ್ಯಾಂಡಲ್ ವುಡ್ ನಟಿಯನ್ನು ಬಂಧಿಸಿದ ಎನ್ ಸಿಬಿ

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಮತ್ತೊಬ್ಬ ಸ್ಯಾಂಡಲ್ ವುಡ್ ನಟಿಯನ್ನು ಬಂಧಿಸಿದ ಎನ್ ಸಿಬಿ

- Advertisement -
- Advertisement -

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಟಿಯ ಬಂಧನವಾಗಿದೆ. ಕನ್ನಡದ ‘ರಿಂಗ್ ಮಾಸ್ಟರ್’ ಸಿನಿಮಾದಲ್ಲಿ ನಟಿಸಿದ್ದ ಶ್ವೇತ ಕುಮಾರಿಯನ್ನು ಎನ್‌ಸಿಬಿ ಅಧಿಕಾರಿಗಳು ಬಂಧಿಸಿದ್ದಾರೆ.

ಶ್ವೇತ ಕುಮಾರಿ ಅವರು ಕನ್ನಡಕ್ಕಿಂತಲೂ ತೆಲುಗು ಸಿನಿಮಾ ಉದ್ಯಮದಲ್ಲಿ ಹೆಚ್ಚು ಸಂಪರ್ಕ ಹೊಂದಿದ್ದಾರೆ. ತೆಲುಗು ಸಿನಿಮಾಗಳಲ್ಲಿ ಸಹ ಹೆಚ್ಚಾಗಿ ನಟಿಸಿರುವ ಶ್ವೇತಾ, ಒಂದು ತಮಿಳು ಸಿನಿಮಾದಲ್ಲಿಯೂ ನಟಿಸಿದ್ದಾರೆ.

ನಟಿ ಶ್ವೇತಾ, ಡ್ರಗ್ಸ್ ಪಡೆಯುತ್ತಿದ್ದರಲ್ಲದೆ, ಡ್ರಗ್ಸ್ ಮಾರಾಟದಲ್ಲಿಯೂ ತೊಡಗಿದ್ದಾರೆ ಎಂದು ಆರೋಪಿಸಲಾಗಿದೆ. ಸೈಯದ್ ಎಂಬ ಡ್ರಗ್ ಪೆಡ್ಲರ್ ಜೊತೆಗೆ ಸಂಪರ್ಕ ಸಹ ಹೊಂದಿದ್ದಾರೆ ಎನ್ನಲಾಗಿದೆ. ನಟಿಯ ಬಂಧನದ ವೇಳೆ ಹತ್ತು ಲಕ್ಷ ನಗದು, 10 ಗ್ರಾಂ ಮಾದಕ ವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ.

ನಟಿಯ ಮೊಬೈಲ್ ಅನ್ನು ಎನ್‌ಸಿಬಿ ವಶಪಡಿಸಿಕೊಂಡಿದ್ದು ಕರೆ ಮಾಹಿತಿ, ಸಂಪರ್ಕ ಸಂಖ್ಯೆ, ವಾಟ್ಸ್‌ಆಪ್ ಚಾಟ್‌ಗಳನ್ನು ಜಾಲಾಡುತ್ತಿದ್ದಾರೆ. ನಟಿಯನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.

- Advertisement -

Latest News

error: Content is protected !!